100 ಕೋಟಿ ಡೋಸ್ ಕೊರೊನಾ ಲಸಿಕೆ- ಐತಿಹಾಸಿಕ ಮೈಲುಗಲ್ಲು ಸಾಧಿಸಿದ ಭಾರತ

100 ಕೋಟಿ ಡೋಸ್ ಕೊರೊನಾ ಲಸಿಕೆ- ಐತಿಹಾಸಿಕ ಮೈಲುಗಲ್ಲು ಸಾಧಿಸಿದ ಭಾರತ

ನವದೆಹಲಿ: ದೇಶದಲ್ಲಿ ಕೊರೊನಾ ಲಸಿಕೆ ಅಭಿಯಾನ ಭರದಿಂದ ಸಾಗುತ್ತಿದೆ. ಇಂದು ಬೆಳಗ್ಗೆ ವೇಳೆಗೆ 100 ಕೋಟಿ ಡೋಸ್ ಲಸಿಕೆ ಹಾಕಿದ ಐತಿಹಾಸಿಕ ಮೈಲುಗಲ್ಲು ಸಾಧನೆಯನ್ನು ಭಾರತ ತಲುಪಿದೆ. ಬುಧವಾರ ದೇಶದ ಒಟ್ಟಾರೆ 99 ಕೋಟಿ 12 ಲಕ್ಷದ 82 ಸಾವಿರದ 283 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿತ್ತು. ಈ ವೇಳೆ ದೇಶದ ಶೇ 75ರಷ್ಟು ವಯಸ್ಕರು ಮೊದಲ ಡೋಸ್ ಲಸಿಕೆ ಪಡೆದುಕೊಂಡಿದ್ದರೆ, ಶೇ 31ರಷ್ಟು ಮಂದಿ ಎರಡೂ ಡೋಸ್ ಪಡೆದುಕೊಂಡಿದ್ದರು. ಲಸಿಕೆ ಅಭಿಯಾನ 100ರ ಗಡಿ ದಾಟಿದ ಹಿನ್ನೆಲೆ ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವೀಯಾ ಅವರು ಇಂದು ದೆಹಲಿಯ ಕೆಂಪು ಕೋಟೆಯಲ್ಲಿ ಕೊರೊನಾ ಲಸಿಕೆ ಸಂಬಂಧಿಸಿದ ಹಾಡೊಂದನ್ನು ಬಿಡುಗಡೆ ಮಾಡಲಿದ್ದಾರೆ. ಇದಕ್ಕಾಗಿ ಆರೋಗ್ಯ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ.