45 ದಿನದಲ್ಲಿ ಸವದತ್ತಿ ಯಲ್ಲಮ್ಮದೇವಿ ಹುಂಡಿಯಲ್ಲಿ 1.18 ಕೋಟಿ ರೂ. ಸಂಗ್ರಹ

45 ದಿನದಲ್ಲಿ ಸವದತ್ತಿ ಯಲ್ಲಮ್ಮದೇವಿ ಹುಂಡಿಯಲ್ಲಿ 1.18 ಕೋಟಿ ರೂ. ಸಂಗ್ರಹ

ಬೆಳಗಾವಿ: ಸವದತ್ತಿ ಯಲ್ಲಮ್ಮನಗುಡ್ಡದಲ್ಲಿ ನಿನ್ನೆ (ಗುರುವಾರ) ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ಜರುಗಿತು. ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯರು, ದೇವಸ್ಥಾನ ಹಾಗೂ ಸವದತ್ತಿ ಪೊಲೀಸ್‌ ಠಾಣೆ ಅಧಿಕಾರಿಗಳ ಸಮ್ಮುಖದಲ್ಲಿ ಕಾಣಿಕೆ ಎಣಿಕೆ ಕಾರ್ಯ ನಡೆದಿದ್ದು, ಬರೋಬ್ಬರಿ 1.18 ಕೋಟಿ ರೂಪಾಯಿ ಕಾಣಿಕೆ ಸಂಗ್ರಹವಾಗಿದೆ. 2020ರ ಅಕ್ಟೋಬರ್ 26ರಿಂದ ಡಿಸೆಂಬರ್ 10ರ ಅವಧಿಯಲ್ಲಿ ಹುಂಡಿಯಲ್ಲಿ 1.18 ಕೋಟಿ ರೂ. ಸಂಗ್ರಹವಾಗಿದೆ. ಅಲ್ಲದೇ 17.39 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಮತ್ತು 2.20 ಲಕ್ಷ ರೂಪಾಯಿ ಮೌಲ್ಯದ ಬೆಳ್ಳಿ ಕಾಣಿಕೆ ರೂಪದಲ್ಲಿ ಸಂಗ್ರಹವಾಗಿದೆ.