ಒಂದೇ ದಿನದಲ್ಲಿ ದೇಶದ 1,733 ಜನ ಕೊರೊನಾಗೆ ಬಲಿ.!

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದೆ. ಆದರೆ ಸಾವಿನ ಸಂಖ್ಯೆಯಲ್ಲಿ ಭಾರೀ ಏರಿಕೆ ಕಾಣುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ದೇಶದಾದ್ಯಂತ ಬುಧವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆ ಅವಧಿಯಲ್ಲಿ 1,61,386 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದೇ ಅವಧಿಯಲ್ಲಿ 1,733 ಮಂದಿ ಮೃತಪಟ್ಟಿದ್ದು, 2,81,109 ಮಂದಿ ಸೋಂಕಿತರು ಚೇತರಿಸಿಕೊಂಡಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಮಂಗಳವಾರ 1,67,059 ಪ್ರಕರಣಗಳು ದೃಢಪಟ್ಟಿದ್ದವು. ಇದಕ್ಕೆ ಹೋಲಿಸಿದರೆ ಇಂದು ಹೊಸ ಪ್ರಕರಣಗಳಲ್ಲಿ ಶೇ 3ರಷ್ಟು ಇಳಿಕೆ ಕಂಡುಬಂದಿದೆ. ಸದ್ಯ ದೇಶದಲ್ಲಿ 17,43,059 ಸಕ್ರಿಯ ಪ್ರಕರಣಗಳಿವೆ. ದೈನಂದಿನ ಪಾಸಿಟಿವಿಟಿ ದರ ಶೇ 9.26ರಷ್ಟಿದೆ. 167.29 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ.