ವಿಶ್ವ ಅಥ್ಲೆಟಿಕ್ ಚಾಂಪಿಯನ್ ಶಿಪ್ : ರಜತ ಪದಕ ಗೆದ್ದ ನೀರಜ್

ಅಮೆರಿಕದ ಯೂಜಿನ್ ನಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ಭಾರತದ ನೀರಜ್ ಚೋಪ್ರಾ ಎರಡನೇ ಸ್ಥಾನದೊಂದಿಗೆ ಬೆಳ್ಳಿ ಗೆದ್ದು ಮತ್ತೊಂದು ಸಾಧನೆ ಮಾಡಿದ್ದಾರೆ.
ಪುರುಷರ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ನೀರಜ್ ಬೆಳ್ಳಿ ಗೆದ್ದಿರುವ ಐತಿಹಾಸಿಕ ದಾಖಲೆ ಮಾಡಿದ್ದಾರೆ. ಈ ಮೂಲಕ ಒಲಿಂಪಿಕ್ಸ್ ನಲ್ಲಿ ಚಿನ್ನ ಹಾಗೂ ವಿಶ್ವ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಗೆದ್ದು ವಿಶಿಷ್ಠ ದಾಖಲೆ ನಿರ್ಮಿಸಿದ್ದಾರೆ.
ಇನ್ನು 4ನೇ ಪ್ರಯತ್ನದಲ್ಲಿ 88.13 ಮೀ ದೂರ ಜಾವಲಿನ್ ಎಸೆಯುವ ಮೂಲಕ ರಜತ ಪದಕ ತಮ್ಮದಾಗಿಸಿಕೊಂಡಿದ್ದಾರೆ.