ದೇಶದಲ್ಲಿ ಇಂದು 2,124 ಜನರಿಗೆ ಕೊರೊನಾ, 17 ಮಂದಿ ಸಾವು

ದೇಶದಲ್ಲಿ ಇಂದು 2,124 ಜನರಿಗೆ ಕೊರೊನಾ, 17 ಮಂದಿ ಸಾವು

ನವದೆಹಲಿ: ದೇಶದಲ್ಲಿ ಕಳೆದೊಂದು ದಿನದಲ್ಲಿ 2,124 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,31,42,192ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ. 

ದೇಶಾದ್ಯಂತ ಕಳೆದೊಂದು ದಿನದಲ್ಲಿ 17 ಮಂದಿ ಸೋಂಕಿಗೆ ಬಲಿಯಾಗಿದ್ದು, ಇಲ್ಲಿಯವರೆಗೆ ಒಟ್ಟು 5,24,507 ಮಂದಿ ಸಾವನ್ನಪ್ಪಿದ್ದಾರೆ. ದೈನಂದಿನ ಪಾಸಿಟಿವಿಟಿ ದರ ಶೇ. 0.46 ರಷ್ಟಿದ್ದು, ಸಾಪ್ತಾಹಿಕ ಪಾಸಿಟಿವಿಟಿ ದರ ಶೇ. 0.49 ರಷ್ಟಿದೆ. ಚೇತರಿಕೆಯ ಪ್ರಮಾಣ ಶೇ. 98.75. ಸದ್ಯ ದೇಶದಲ್ಲಿ 14,971 ಸಕ್ರಿಯ ಪ್ರಕರಣಗಳಿವೆ. ನಿನ್ನೆ(ಮಂಗಳವಾರ) 1,977 ಮಂದಿ ಚೇತರಿಸಿಕೊಂಡಿದ್ದು, ಈವರೆಗೆ ಒಟ್ಟು 4,26,02,714 ಮಂದಿ ಗುಣಮುಖರಾಗಿದ್ದಾರೆ. ರಾಷ್ಟ್ರವ್ಯಾಪಿ ಕೋವಿಡ್ ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ 192.67 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.