ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿದ್ಯಾಕಾಶಿ ಧಾರವಾಡಕ್ಕೆ 22ನೇ ಸ್ಥಾನ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿದ್ಯಾಕಾಶಿ ಧಾರವಾಡಕ್ಕೆ 22ನೇ ಸ್ಥಾನ

ಧಾರವಾಡ: ವಿದ್ಯಾಕಾಶಿ ಹಾಗೂ ಶೈಕ್ಷಣಿಕ ಕ್ಷೇತ್ರ ಎಂಬೆಲ್ಲ ಹೆಸರುಗಳಿಂದ ಕರೆಯಿಸಿಕೊಳ್ಳುವ ಧಾರವಾಡ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶದಲ್ಲಿ 22ನೇ ಸ್ಥಾನಕ್ಕೇರಿದೆ. 

ಜಿಲ್ಲೆಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 29148 ವಿದ್ಯಾರ್ಥಿಗಳು ಹಾಜರಾಗಿದ್ದರು. ಅದರಲ್ಲಿ 21182 ಜನ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 2023 ರಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ವಿದ್ಯಾಕಾಶಿ ಧಾರವಾಡ 24 ನೇ ಸ್ಥಾನ ಪಡೆದಿತ್ತು. ಈ ವರ್ಷದ ಫಲಿತಾಂಶದಲ್ಲಿ ಎರಡು ಸ್ಥಾನ ಮೇಲಕ್ಕೇರಿದೆ. ಅಂದರೆ 22ನೇ ಸ್ಥಾನಕ್ಕೇರಿದೆ.