ಎಸ್ಸೆಸ್ಸೆಲ್ಸಿ ದ್ವಿತೀಯ ಭಾಷಾ ಪರೀಕ್ಷೆಗೆ 28,133 ವಿದ್ಯಾರ್ಥಿಗಳು ಹಾಜರು - 366 ಗೈರು

ಧಾರವಾಡ : ಧಾರವಾಡ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಉತ್ತಮ ರೀತಿಯಲ್ಲಿ ನಡೆದಿದ್ದು, ಇಂದಿನ ದ್ವಿತೀಯ ಭಾಷಾ ವಿಷಯಗಳ ಪರೀಕ್ಷೆಗೆ ಜಿಲ್ಲೆಯ ಪರೀಕ್ಷಾ ಕೇಂದ್ರಗಳಲ್ಲಿ 28,133 ವಿದ್ಯಾರ್ಥಿಗಳು ಹಾಜರಾಗಿದ್ದರು. ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ 366 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಎಸ್. ಕೆಳದಿಮಠ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯ 7 ತಾಲೂಕುಗಳ 101 ಪರೀಕ್ಷಾ ಕೇಂದ್ರಗಳಲ್ಲಿ ನಿಯಮಾನುಸಾರ ಪರೀಕ್ಷೆ ನಡೆದಿವೆ. ಜಾಗೃತ ದಳದ ಅಧಿಕಾರಿಗಳು ನಕಲು ತಡೆಯಲು ಉತ್ತಮ ತಪಾಸಣೆ ಕೈಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.