ಕಳೆದ 24 ಗಂಟೆಗಳಲ್ಲಿ ರಾಜ್ಯದ 37 ಜನರಿಗೆ ಕೋವಿಡ್ ಪಾಸಿಟಿವ್ - ಸಕ್ರಿಯ ಪ್ರಕರಣಗಳ ಸಂಖ್ಯೆ 80ಕ್ಕೆ ಏರಿಕೆ

ಕಳೆದ 24 ಗಂಟೆಗಳಲ್ಲಿ ರಾಜ್ಯದ 37 ಜನರಿಗೆ ಕೋವಿಡ್ ಪಾಸಿಟಿವ್ - ಸಕ್ರಿಯ ಪ್ರಕರಣಗಳ ಸಂಖ್ಯೆ 80ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಕೊವಿಡ್-19 ಪ್ರಕರಣಗಳು ನಿಧಾನವಾಗಿ ಏರಿಕೆ ಕಾಣುತ್ತಿದ್ದು, ಒಟ್ಟು 80 ಸಕ್ರಿಯ ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಗಳಲ್ಲಿ 37 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಬೆಂಗಳೂರು ನಗರವು ಅತಿ ಹೆಚ್ಚು ಪ್ರಕರಣಗಳನ್ನು ಹೊಂದಿದ್ದು, ಇಂದು 35 ಹೊಸ ಪ್ರಕರಣಗಳು ದಾಖಲಾಗಿವೆ. 

ಇದರೊಂದಿಗೆ ಬೆಂಗಳೂರಿನಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 73ಕ್ಕೆ ಏರಿದೆ. ಮೈಸೂರಿನಲ್ಲಿ 3 ಸಕ್ರಿಯ ಪ್ರಕರಣಗಳಿದ್ದರೆ, ಬೆಂಗಳೂರು ಗ್ರಾಮಾಂತರದಲ್ಲಿ 2 ಸಕ್ರಿಯ ಪ್ರಕರಣಗಳಿವೆ. ದಕ್ಷಿಣ ಕನ್ನಡ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ತಲಾ 1 ಸಕ್ರಿಯ ಪ್ರಕರಣ ವರದಿಯಾಗಿದೆ. ಈ ಸಡನ್ ಏರಿಕೆಯು ಸಾರ್ವಜನಿಕರಲ್ಲಿ ಮತ್ತೆ ಆತಂಕ ಮೂಡಿಸಿದ್ದು, ಆರೋಗ್ಯ ಇಲಾಖೆ ಎಚ್ಚರಿಕೆ ವಹಿಸುವಂತೆ ಸೂಚಿಸಿದೆ.