ಧಾರವಾಡ: ಅಕ್ಟೋಬರ್ 30 ರಂದು ಕರ್ನಾಟಕ ವಿಶ್ವವಿದ್ಯಾಲಯದ 73ನೇ ವಾರ್ಷಿಕ ಘಟಿಕೋತ್ಸವ

ಧಾರವಾಡ: ಅಕ್ಟೋಬರ್ 30 ರಂದು ಕರ್ನಾಟಕ ವಿಶ್ವವಿದ್ಯಾಲಯದ 73ನೇ ವಾರ್ಷಿಕ ಘಟಿಕೋತ್ಸವ

ಧಾರವಾಡ: ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ 73ನೇ ವಾರ್ಷಿಕ ಘಟಿಕೋತ್ಸವವು ಅಕ್ಟೋಬರ್ 30 ರಂದು ಬೆಳಿಗ್ಗೆ 10:30 ಗಂಟೆಗೆ ವಿಶ್ವವಿದ್ಯಾಲಯದ ಗಾಂಧಿ ಭವನದಲ್ಲಿ ಜರುಗಲಿದೆ. 

ವಾರ್ಷಿಕ ಘಟಿಕೋತ್ಸವದ ಅಧ್ಯಕ್ಷತೆಯನ್ನು ಕವಿವಿ ಕುಲಾಧಿಪತಿಗಳಾಗಿರುವ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಸಮಕುಲಾಧಿಪತಿಗಳು ಆಗಿರುವ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಅವರು ಉಪಸ್ಥಿತರಿರುವರು. 

ನವದೆಹಲಿಯ ಇಂಡೋ ಪ್ರಂಚ್ ಸೆಂಟರ್ ಫಾರ್ ಪ್ರಮೋಷನ್ ಆಫ್ ಅಡ್ವಾನ್ಸ್ಡ್ ರಿಸರ್ಚ್ ಕೇಂದ್ರದ ನಿರ್ದೇಶಕರಾದ ಪ್ರೊ. ನಿತಿನ್ ಶೇಠ್ ಅವರು ಘಟಿಕೋತ್ಸವದ ಭಾಷಣ ಮಾಡಲಿದ್ದಾರೆ ಎಂದು ಕವಿವಿ ಕುಲಪತಿ ಪ್ರೊ. ಕೆ.ಬಿ.ಗುಡಸಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.