24 ಗಂಟೆಯಲ್ಲಿ ದೇಶದಲ್ಲಿ 7,992 ಹೊಸ ಕೇಸ್ ಪತ್ತೆ : 393 ಮಂದಿ ಸಾವು

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 7,992 ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 393 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. ಶನಿವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,46,82,736ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,71,134ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 93,277 ಕ್ಕೆ ತಲುಪಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 9,265 ಮಂದಿ ಗುಣಮುಖರಾಗುವುದರೊಂದಿಗೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 3,41,14,331ಕ್ಕೆ ತಲುಪಿದೆ. ಇನ್ನು ಭಾರತದಲ್ಲಿ ಒಂದೇ 8,86,263 ಮಂದಿಯನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿದ್ದು, 64,82,59,067 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ. ಇಲ್ಲಿಯವರೆಗೂ ಒಟ್ಟಾರೆ 1,31,18,87,257 ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದೆ.