ಬಿಜೆಪಿಯಿಂದ ಅಭ್ಯರ್ಥಿಗಳ 7ನೇ ಪಟ್ಟಿ ಪ್ರಕಟ - ಚಿತ್ರದುರ್ಗಕ್ಕೆ 'ಗೋವಿಂದ ಕಾರಜೋಳ'ಗೆ ಟಿಕೆಟ್

ಬಿಜೆಪಿಯಿಂದ ಅಭ್ಯರ್ಥಿಗಳ 7ನೇ ಪಟ್ಟಿ ಪ್ರಕಟ - ಚಿತ್ರದುರ್ಗಕ್ಕೆ 'ಗೋವಿಂದ ಕಾರಜೋಳ'ಗೆ ಟಿಕೆಟ್

ಬೆಂಗಳೂರು : ಬಿಜೆಪಿ ಹೈಕಮಾಂಡ್ ನಿಂದ ಇಂದು ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ 7ನೇ ಪಟ್ಟಿ ಪ್ರಕಟಿಸಲಾಗಿದೆ. ಕಗ್ಗಂಟಾಗಿದ್ದಂತ ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಗೋವಿಂದ ಕಾರಜೋಳ ಅವರಿಗೆ ಟಿಕೆಟ್ ಹಂಚಿಕೆ ಮಾಡಲಾಗಿದೆ. ಈ ಕುರಿತಂತೆ ಬಿಜೆಪಿಯಿಂದ ಇಂದು ಅಭ್ಯರ್ಥಿಗಳ 7ನೇ ಪಟ್ಟಿಯನ್ನು ಪ್ರಕಟಿಸಲಾಗಿದೆ. 

ಪ್ರಕಟಿತ ಪಟ್ಟಿಯಲ್ಲಿ ಮಹಾರಾಷ್ಟ್ರದ ಅಮರಾವತಿ ಲೋಕಸಭಾ ಕ್ಷೇತ್ರಕ್ಕೆ ನವನೀತ್ ರಾಣಾಗೆ ಟಿಕೆಟ್ ನೀಡಲಾಗಿದೆ. ಕರ್ನಾಟಕದ ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಮಾಜಿ ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಟಿಕೆಟ್ ನೀಡಲಾಗಿದೆ. 

ಅಂದ ಹಾಗೇ ಕೇಂದ್ರ ಸಚಿವ ಎ ನಾರಾಯಣಸ್ವಾಮಿಗೆ ಈ ಬಾರಿಯ ಲೋಕಸಭಾ ಚುನಾವಣೆಯ ಟಿಕೆಟ್ ಮಿಸ್ ಆಗಿದೆ. ಈ ಮೂಲಕ ಬಿಜೆಪಿ ಹೈಕಮಾಂಡ್ ಕೇಂದ್ರ ಸಚಿವ ಎ.ನಾರಾಯಣಸ್ವಾಮಿಗೆ ಶಾಕ್ ನೀಡಲಾಗಿದೆ.