ವಿದೇಶದಿಂದ ಬೆಂಗಳೂರಿಗೆ ಬರುವ ಪ್ರಯಾಣಿಕರಿಗೆ ಕಡ್ಡಾಯವಾಗಿ 7 ದಿನಗಳ ಕ್ವಾರಂಟೈನ್

ವಿದೇಶದಿಂದ ಬೆಂಗಳೂರಿಗೆ ಬರುವ ಪ್ರಯಾಣಿಕರಿಗೆ ಕಡ್ಡಾಯವಾಗಿ  7 ದಿನಗಳ ಕ್ವಾರಂಟೈನ್

ದೇವನಹಳ್ಳಿ : ವಿದೇಶದಿಂದ ಬರುವ ಪ್ರಯಾಣಿಕರಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆ ವಿದೇಶಿ ಪ್ರಯಾಣಿಕರಿಗೆ ಕಡ್ಡಾಯವಾಗಿ 7 ದಿನಗಳ ಹೋಮ್ ಕ್ವಾರಂಟೈನ್ ಗೆ ಒಳಗಾಗುವಂತೆ ಆದೇಶ ಮಾಡಲಾಗಿದೆ. ಭಾರತದ ಸರ್ಕಾರದ ಇತ್ತೀಚಿನ ಮಾರ್ಗಸೂಚಿ ಪ್ರಕಾರ ಏರ್ ಪೋರ್ಟ್ ನಲ್ಲಿ ವಿದೇಶಿ ಪ್ರಯಾಣಿಕರ ಮೇಲೆ ನಿಗಾ ವಹಿಸಲಾಗಿದೆ, ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುವ ವಿದೇಶಿ ಪ್ರಯಾಣಿಕರಲ್ಲಿಯೂ ಸಹ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೆ ಇತ್ತು, ಈ ಮೊದಲು ಹೈ ರಿಸ್ಕ್ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾವಹಿಸಲಾಗಿತ್ತು, ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆ ವಿದೇಶದಿಂದ ಬರುವ ಪ್ರಯಾಣಿಕರನ್ನ ಕಡ್ಡಾಯವಾಗಿ 7 ದಿನಗಳ ಹೋಮ್ ಕ್ವಾರಂಟೈನ್ ಗೆ ಒಳಗಾಗ ಬೇಕು, 8 ನೇ ದಿನ ಆರ್ ಟಿ ಪಿಸಿಆರ್ ಟೆಸ್ಟ್ ವರದಿಯನ್ನ ಏರ್ ಸುವಿಧಾ ಪೋರ್ಟಲ್ ಗೆ ಆಪ್ ಲೋಡ್ ಮಾಡಬೇಕಿದೆ, ಜನವರಿ 11 ರಿಂದ ಆದೇಶ ಜಾರಿಯಲಿದೆ.