ಧಾರವಾಡ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಗುದ್ದಿದ ಆಟೋ

ಧಾರವಾಡ : ಆಟೋ ರಿಕ್ಷಾ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ ಗೆ ಗುದ್ದಿ ಅಪಘಾತ ಸಂಭವಿಸಿದ ಘಟನೆ ಧಾರವಾಡ ಕೆಎಂಎಫ್ ಬಳಿ ನಡೆದಿದೆ. ಘಟನೆಯಲ್ಲಿ ಆಟೋ ರಿಕ್ಷಾ ಜಖಂಗೊಂಡಿದೆ. ಆಟೋ ರಿಕ್ಷಾ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ದೌಡಾಯಿಸಿದ ಧಾರವಾಡ ಸಂಚಾರಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.