ವರ್ಕೌಟ್ ಮಾಡುತ್ತಿರುವಾಗಲೇ ಹೃದಯಾಘಾತ : ಮತ್ತೊಬ್ಬ ಸ್ಟಾರ್ ನಟ ಸಾವು
ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿರುವಾಗ ಹೃದಯಾಘಾತ ಸಂಭವಿಸಿ ಜನಪ್ರಿಯ ಟಿವಿ ನಟ ಸಿದ್ಧಾಂತ್ ವೀರ್ ಸೂರ್ಯವಂಶಿ (46)ನಿಧನರಾಗಿದ್ದಾರೆ.
ಹೌದು ಸಿದ್ಧಾಂತ್ ಇಂದು ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದಾಗ ಹಠಾತ್ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ವೈದ್ಯರು ಅವರನ್ನ ಬದಕಿಸಿಕೊಳ್ಳಲು ಎಲ್ಲಾ ರೀತಿಯ ಪ್ರಯತ್ನವನ್ನ ಮಾಡಿದರು ಚಿಕಿತ್ಸೆ ಫಲಿಸಲಿಲ್ಲ.
ಸಿದ್ಧಾಂತ್ ಅವರನ್ನ ಮೊದಲ ಆನಂದ್ ಎಂದು ಕರೆಯಲಾಗುತ್ತಿತ್ತು. ನಂತರದ ದಿನಗಳಲ್ಲಿ ಸಿದ್ಧಾಂತ್ ವೀರ್ ಸೂರ್ಯವಂಶಿ ಎಂದು ತಮ್ಮ ಹೆಸರನ್ನ ಬದಲಾಯಿಸಿಕೊಂಡಿದ್ದರು.
ಹಿಂದಿ ಸೀರಿಯಲ್ ಹಾಗೂ ರಿಯಾಲಿಟಿ ಶೋ ಮೂಲಕ ಜನಪ್ರಿಯತೆಗಳಿಸಿದ್ದರು.