ಕೊರೊನಾ ಸೋಂಕು ಹೆಚ್ಚಿರುವ ಜಿಲ್ಲೆಗಳ ಅಧಿಕಾರಿಗಳೊಂದಿಗೆ ಸಿಎಂ ವಿಡಿಯೋ ಸಂವಾದ: ಮತ್ತೆ ಆಗುತ್ತಾ ಲಾಕ್ ಡೌನ್ ..?

ಬೆಂಗಳೂರು: ಕೊರೊನಾ ಸೋಂಕು ಹೆಚ್ಚಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಗೃಹ ಕಚೇರಿ ಕೃಷ್ಣಾದಲ್ಲಿ ವಿಡಿಯೋ ಕಾನ್ಫರೆನ್ಸ್ ಸಂವಾದ ನಡೆಸಿದ್ದಾರೆ. ರಾಜ್ಯಾದ್ಯಂತ ಮತ್ತೊಮ್ಮೆ ಲಾಕ್ ಡೌನ್ ಆಗುತ್ತಾ ಎಂಬ ಅನುಮಾನ ಮೂಡಿದೆ.
ಬೆಂಗಳೂರು ನಗರ, ಗ್ರಾಮಾಂತರ, ಕಲ್ಬುರ್ಗಿ, ಮೈಸೂರು, ಉಡುಪಿ, ಮಂಗಳೂರು, ರಾಯಚೂರು, ಗದಗ, ಬೆಳಗಾವಿ, ಬೀದರ್, ಧಾರವಾಡ ಸೇರಿದಂತೆ ಅನೇಕ ಜಿಲ್ಲೆಗಳ ಜಿಲ್ಲಾಧಿಕಾರಿ ಗಳು, ಸಿಇಒ, ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಜೊತೆಗೆ ಕೊರೋನಾ ಪರಿಸ್ಥಿತಿ ಹಾಗೂ ನಿಯಂತ್ರಣದ ಕುರಿತು ಸಿಎಂ ಯಡಿಯೂರಪ್ಪ ಚರ್ಚೆ ನಡೆಸುತ್ತಿದ್ದಾರೆ.
ಜಿಲ್ಲಾಡಳಿತದಿಂದ ಏನೆಲ್ಲಾ ಕ್ರಮ ಕೈಗೊಳ್ಳಲಾಗಿದೆ? ಸದ್ಯ ಕ್ರಮದಿಂದ ಕೊರೋನಾ ಎಷ್ಟರ ಮಟ್ಟಿಗೆ ನಿಯಂತ್ರಣವಾಗಿದೆ? ಸೋಂಕಿತರ ಸಂಖ್ಯೆ ಎಷ್ಟಿದೆ? ಜಿಲ್ಲೆಯಲ್ಲಿ ಸಾವಿನ ಪ್ರಮಾಣ ಎಷ್ಟಿದೆ? ಎಂಬುದರ ಬಗ್ಗೆಯೂ ಮಾಹಿತಿ ಪಡೆಯಲಾಗುತ್ತಿದೆ ಎಂದು ತಿಳಿದುಬಂದಿದೆ.
ರಾಜ್ಯದಲ್ಲಿ ಕೊರೋನಾ ಸೋಂಕನ್ನು ನಿಯಂತ್ರಿಸಲು ಲಾಕ್ ಡೌನ್ ಒಂದೇ ನಮ್ಮ ಮುಂದಿರುವ ಏಕೈಕ ಮಾರ್ಗ. ಹೀಗಾಗಿ ರಾಜ್ಯ ಸರ್ಕಾರ ರಾಜ್ಯಾದ್ಯಂತ ಮತ್ತೆ ಲಾಕ್ಡೌನ್ ಘೋಷಣೆ ಮಾಡಬೇಕು ಎಂದು ತಜ್ಞರು ಸತತವಾಗಿ ಒತ್ತಾಯಿಸುತ್ತಿದ್ದಾರೆ.