ಏರ್ ಇಂಡಿಯಾ ಹರಾಜಾಗಿರುವುದು ಸುಳ್ಳು: ಮಾಧ್ಯಮ ವರದಿ ತಪ್ಪು ಎಂದ ಸರ್ಕಾರ

ಏರ್ ಇಂಡಿಯಾ ಹರಾಜಾಗಿರುವುದು ಸುಳ್ಳು: ಮಾಧ್ಯಮ ವರದಿ ತಪ್ಪು ಎಂದ ಸರ್ಕಾರ

ದೆಹಲಿ: ಏರ್ ಇಂಡಿಯಾ ಸಂಸ್ಥೆಯನ್ನು ಹಳೆಯ ಮಾಲೀಕ ಟಾಟಾ ಗ್ರೂಪ್ ಖರೀದಿಸುವಲ್ಲಿ ಯಶಸ್ವಿಯಾಗಿದೆ. ಎನ್ನುವ ಸುದ್ದಿಯ ಬೆನ್ನಲ್ಲೆ ಸರ್ಕಾರ ಮಾಧ್ಯಮದ ವರದಿಯನ್ನು ನಿರಾಕರಿಸಿದೆ. 

 

ಹರಾಜಿನಲ್ಲಿ ಟಾಟಾ ಸಮೂಹ ಸಂಸ್ಥೆ ಏರ್ ಇಂಡಿಯಾವನ್ನು ಖರೀದಿಸಿದೆ. ಇಂದು ಭಾರತೀಯ ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ಸಂಸ್ಥೆಯ ಖರೀದಿ ಸಂಬಂಧ ಹರಾಜು ನಡೆಸಲಾಯಿತು.ಈ ಹರಾಜು ಪ್ರಕ್ರಿಯೆಯಲ್ಲಿ ಹಲವಾರು ಸಂಸ್ಥೆಗಳು ಭಾಗಿಯಾಗಿದ್ದವು. ಅಂತಿಮವಾಗಿ ಟಾಟಾ ಸನ್ಸ್ ಸಂಸ್ಥೆ ಏರ್ ಇಂಡಿಯಾ ಸಂಸ್ಥೆಯನ್ನು ಖರೀದಿಸುವಲ್ಲಿ ಯಶಸ್ವಿಯಾಗಿದೆ. ಬಹುದೊಡ್ಡ ಮೊತ್ತ ನೀಡಿ ಖರೀದಿ ಮಾಡಲಾಗಿದೆ ಎಂದು ಹೇಳಲಾಗುತಿತ್ತು. ಆದರೆ ಅವೆಲ್ಲ ಸುಳ್ಳು ವದಂತಿಗಳು ಎಂದು DIPAM ತಿಳಿಸಿದೆ. 

 

ಏರ್ ಇಂಡಿಯಾ ಸಂಸ್ಥೆಯನ್ನು ಖರೀದಿಸಲು ಬಿಡ್ ಸಲ್ಲಿಸಿದ್ದ ಸಂಸ್ಥೆಗಳ ಪೈಕಿ ಟಾಟಾ ಸನ್ಸ್ ಹಾಗೂ ಸ್ಪೈಸ್ ಜೆಟ್ ಸಂಸ್ಥೆಗಳು ಪ್ರಮುಖ ಸಂಸ್ಥೆಗಳಾಗಿದ್ದವು. ಈ ಪೈಕಿ ಅಂತಿಮವಾಗ ಏರ್ ಇಂಡಿಯಾವನ್ನು ಖರೀದಿಸಲು ಸಲ್ಲಿಸಿದ್ದ ಫೈನಲ್ ಬಿಡ್ ಟಾಟಾ ಸಮೂಹ ಸಂಸ್ಥೆ ಪಾಲಾಗಿದೆ ಎಂಬ ವದಂತಿಗಳು ಹರಿದಾಡುತ್ತಿದ್ದವು. ಎಲ್ಲೆಡೆ ಹರಿದಾಡುತ್ತಿರೋ ಈ ಸುದ್ದಿ ಸುಳ್ಳು ಎಂದು DIPAM (Department of Investment and Public Asset Management ) ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣಾ ಇಲಾಖೆ ಟ್ವೀಟ್ ಮಾಡಿದೆ. 

 

ಈ ಬಗ್ಗೆ ಅಧಿಕೃತ ಹೇಳಿ ಹೊರಬೀಳುವುದಾಗಿ ತಿಳಿಸಿದೆ.