ಅಲ್ಲಾಹು ಅಕ್ಬರ್ ಎಂದ ಮುಸ್ಕಾನ್ ವಿರುದ್ಧ ತನಿಖೆಗೆ ಮನವಿ

ಬೆಂಗಳೂರು:ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್ ವಿರುದ್ಧ ಕ್ರಮತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಸಂಸದ ಅನಂತ್ ಕುಮಾರ್ ಹೆಗಡೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ. ಹಿಜಾಬ್ ಸಮಯದಲ್ಲಿ ಮುಸ್ಕಾನ್ ಅಲ್ಲಾಹು ಅಕ್ಬರ್ ಎಂದು ಕೂಗಿದ್ದಳು. ಇದರಿಂದ ಪ್ರಭಾವಿತನಾಗಿರೋ ಅಲ್ ಖೈದಾ ಉಗ್ರ ಜವಾಹಿರಿ ಕೂಡ ಹೊಗಳ್ಳಿದ್ದಾನೆ. ಈ ಹಿನ್ನೆಲೆಯಲ್ಲಿ ತನಿಖೆ ಆಗಬೇಕು ಎಂದು ಸಂಸದ ಅನಂತ್‌ಕುಮಾರ್ ಹೆಗಡೆ ಸಿಎಂಗೆ ಪತ್ರ ಬರೆದು ಮನವಿ ಮಾಡಿದ್ದಾರೆ.