ಕುಮಾರಸ್ವಾಮಿಗೆ ಅಮಿತ್ ಶಾ ಬುಲಾವ್

ದೆಹಲಿ : ಮಂಡ್ಯ ಲೋಕಸಭೆ ಅಭ್ಯರ್ಥಿಯಾಗಿ ಅತ್ಯಧಿಕ ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಕೇಂದ್ರ ಗೃಹಸಚಿವ ಅಮಿತ್ ಶಾ ಅವರಿಂದ ಬುಲಾವ್ ಬಂದಿದ್ದು, ಕುಮಾರಸ್ವಾಮಿ ಅವರು ದೆಹಲಿಗೆ ತೆರಳಿದ್ದಾರೆಂದು ಜೆಡಿಎಸ್ ಆಪ್ತ ಮೂಲಗಳು ತಿಳಿಸಿವೆ.
ಇನ್ನು, ದೇಶಾದ್ಯಂತ ಗೆದ್ದು ಬೀಗಿದ ಎನ್ ಡಿಎ ಅಭ್ಯರ್ಥಿಗಳನ್ನು ದೆಹಲಿಗೆ ಬರುವಂತೆ ಅಮಿತ್ ಶಾ ಸೂಚಿಸಿದ್ದಾರೆಂದು ದೆಹಲಿ ಮೂಲಗಳಿಂದ ತಿಳಿದು ಬಂದಿದೆ.