ಪ್ರಾಸಿಕ್ಯೂಷನ್ ಆಸ್ತ್ರದ ವಿರುದ್ಧ ಪ್ರತ್ಯಾಸ್ತ್ರದ ಬಗ್ಗೆ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಪ್ರಾಸಿಕ್ಯೂಷನ್ ಆಸ್ತ್ರದ ವಿರುದ್ಧ ಪ್ರತ್ಯಾಸ್ತ್ರದ ಬಗ್ಗೆ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟದ್ದಕ್ಕೆ ವಿಪಕ್ಷ ನಾಯಕರ ವಿರುದ್ಧದ ಪ್ರಾಸಿಕ್ಯೂಷನ್‌ಗೆ ನಿರ್ಧರಿಸಿ ಎಂದು ರಾಜ್ಯಪಾಲರಿಗೆ ಸಲಹೆ ನೀಡಬೇಕು ಎಂದು ಸಚಿವ ಸಂಪುಟ ತೀರ್ಮಾನಿಸಿದೆ. 

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯಲ್ಲಿ ಪ್ರಾಸಿಕ್ಯೂಷನ್ ಅಸ್ತ್ರಕ್ಕೆ ಪ್ರತ್ಯಾಸ್ತ್ರವಾಗಲೇಬೇಕು, ವಿಪಕ್ಷ ನಾಯಕರ ವಿರುದ್ಧದ ಪ್ರಾಸಿಕ್ಯೂಷನ್‌ಗೆ ನಿರ್ಧಾರಿಸಬೇಕು ಎಂದು ಸಂಪುಟ ಸಭೆ ಚರ್ಚೆಯಾಗಿದೆ. 
ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧದ ಗಣಿ ಗುತ್ತಿಗೆ ಆರೋಪ, ಮಾಜಿ ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧದ ಪ್ರಕರಣ, ಮುರುಗೇಶ್ ನಿರಾಣಿ ವಿರುದ್ಧದ ಪ್ರಕರಣ ಹಾಗೂ ಜನಾರ್ದನ ರೆಡ್ಡಿ ವಿರುದ್ಧದ ಪ್ರಕರಣ ಸೇರಿ ಒಟ್ಟು 4 ಪ್ರಕರಣಗಳಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಅವರಿಗೆ ಸಲಹೆಯನ್ನು ನೀಡಲು ಸಚಿವ ಸಂಪುಟ ಸಭೆ ಮಹತ್ವದ ತೀರ್ಮಾನ ಕೈಗೊಂಡಿದೆ. 

ಈ ಬಗ್ಗೆ ಸಂಪುಟ ಸಭೆಯ ಬಳಿಕ ಮಾತನಾಡಿರುವ ಕಾನೂನು ಸಚಿವ ಹೆಚ್ ಕೆ ಪಾಟೀಲ್, ಪ್ರಾಸಿಕ್ಯೂಷನ್ ಬಗ್ಗೆ ಶೀಘ್ರವಾಗಿ ತೀರ್ಮಾನ ಕೈಗೊಳ್ಳಲು ರಾಜ್ಯಪಾಲರಿಗೆ ಆರ್ಟಿಕಲ್ 163 ಅನ್ವಯ ಸಲಹೆ ನೀಡುವ ಸಂಪುಟ ಅಧಿಕಾರವನ್ನು ಬಳಿಸಿಕೊಳ್ಳಲಾಗಿದೆ ಎಂದು‌ ವಿವರಿಸಿದರು.