ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ರಾಜೀನಾಮೆ.

ನವದೆಹಲಿ : ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.
ಡಿಸೆಂಬರ್, 2016 ರಲ್ಲಿ ದೆಹಲಿ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಿಸಲಾಯಿತು. ಅವರು ಈ ಹಿಂದೆ ಕೇಂದ್ರ ಗೃಹ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.