ನಾಳೆಯಿಂದಲೇ ಅನ್ನಭಾಗ್ಯ ಯೋಜನೆ ಜಾರಿ-ಅಕ್ಕಿ ಬದಲು ಅಕೌಂಟ್‌ಗೆ ಹಣ ಜಮೆ

ನಾಳೆಯಿಂದಲೇ ಅನ್ನಭಾಗ್ಯ ಯೋಜನೆ ಜಾರಿ-ಅಕ್ಕಿ ಬದಲು ಅಕೌಂಟ್‌ಗೆ ಹಣ ಜಮೆ

ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ 'ಅನ್ನಭಾಗ್ಯ' ಯೋಜನೆ ಜಾರಿಯಾಗಲಿದೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದ್ದಾರೆ. 

 

5 ಕೆಜಿ ಅಕ್ಕಿ ಜೊತೆ ಉಳಿದ 5 ಕೆಜಿಗೆ ಹಣ ನೀಡುತ್ತೇವೆ. ನಾಳೆಯಿಂದ ಅನ್ನಭಾಗ್ಯ ಯೋಜನೆ ಜಾರಿಯಾಗಲಿದೆ. ಹೆಚ್ಚುವರಿ ಅಕ್ಕಿ ಸಿಗುವವರೆಗೂ ಖಾತೆಗೆ ಹಣ ವರ್ಗಾವಣೆ ಮಾಡುತ್ತೇವೆ ಎಂದರು. ಬ್ಯಾಂಕ್ ಖಾತೆ ಇಲ್ಲದವರು ಹೊಸದಾಗಿ ಖಾತೆ ಮಾಡಿಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ. 

5 ಕೆಜಿ ಅಕ್ಕಿ ಬದಲು ಹಣ ನೀಡಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದ್ದು, ಅಕ್ಕಿ ಕೊರತೆ ಹಿನ್ನೆಲೆ ಬಿಪಿಎಲ್ ಕಾರ್ಡ್‌ದಾರರಿಗೆ ಅಕ್ಕಿ ಬದಲು ಹಣ ನೀಡಲು ನಿರ್ಧರಿಸಲಾಗಿದೆ. 1ಕೆಜಿ ಅಕ್ಕಿಗೆ 34 ರೂ ನೀಡಲು ನಿರ್ಧಾರ ಮಾಡಲಾಗಿದೆ. ಜುಲೈ 1 ರಿಂದಲೇ ಬಿಪಿಎಲ್ ಕಾರ್ಡ್‌ದಾರರಿಗೆ ಹಣ ಜಮಾ ಮಾಡಲಾಗುತ್ತದೆ. ಬಿಪಿಎಲ್ ಕಾರ್ಡ್ದಾರರಿಗೆ ಹೆಚ್ಚುವರಿ 5 ಕೆಜಿ ಅಕ್ಕಿ ಬದಲಿಗೆ ಕೆಜಿಗೆ 34 ರೂಪಾಯಿಯಂತೆ ತಲಾ 170 ಹಣ ಪಾವತಿಸಬೇಕಾಗಿದೆ ಎಂದು ಸಚಿವ ಮುನಿಯಪ್ಪ ಹೇಳಿದ್ದಾರೆ