ವಿಜಯಪುರ ಜಿಲ್ಲೆಗೆ ತೋಟಗಾರಿಕೆ ಕಾಲೇಜು ಘೋಷಣೆ

ವಿಜಯಪುರ ಜಿಲ್ಲೆಗೆ ತೋಟಗಾರಿಕೆ ಕಾಲೇಜು ಘೋಷಣೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಜಯಪುರ ಜಿಲ್ಲೆಗೆ ಈ ಬಾರಿಯ ಬಜೆಟ್‌ನಲ್ಲಿ ಹೆಚ್ಚಿನ ಒಲವು ತೋರಿದ್ದಾರೆ. 

ಹೌದು. ಆಹಾರ ಪಾರ್ಕ್ ನಿರ್ಮಾಣ ಭರವಸೆ ಬೆನ್ನಲ್ಲೇ ವಿಜಯಪುರ ಜಿಲ್ಲೆಗೆ ತೋಟಗಾರಿಕೆ ಕಾಲೇಜು ಘೋಷಣೆ ಮಾಡಿದ್ದಾರೆ. 

ತೋಟಗಾರಿಕೆ ಬೆಳೆಗಳಿಗೆ ವಿಜಯಪುರ ಜಿಲ್ಲೆಯು ಹೆಸರುವಾಸಿಯಾಗಿದೆ. ಈ ಭಾಗದಲ್ಲಿ ತೋಟಗಾರಿಕೆ ಬೆಳೆಗಳಿಗೆ ಇನ್ನಷ್ಟು ಉತ್ತೇಜನ ನೀಡಲು ವಿಜಯಪುರ ಜಿಲ್ಲೆಯ ಆಲಮೇಲದಲ್ಲಿ ತೋಟಗಾರಿಕೆ ಕಾಲೇಜನ್ನು ಸ್ಥಾಪಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. 

ಏಷ್ಯಾದಲ್ಲಿಯೇ ಅತಿ ಹೆಚ್ಚು ರೇಷ್ಮೆಗೂಡು ಮಾರಾಟ ವಹಿವಾಟು ನಡೆಸುವ ರಾಮನಗರ ಮತ್ತು ಶಿಡ್ಲಘಟ್ಟದಲ್ಲಿರುವ ರೇಷ್ಮೆ ಮಾರುಕಟ್ಟೆಗಳನ್ನು ಮೊದಲನೇ ಹಂತದಲ್ಲಿ 150 ಕೋಟಿ ರೂ. ವೆಚ್ಚದಲ್ಲಿ ಹೈ-ಟೆಕ್ ಮಾರುಕಟ್ಟೆಗಳನ್ನಾಗಿ ಅಭಿವೃದ್ಧಿಪಡಿಸಲು ಈಗಾಗಲೇ ಕ್ರಮವಹಿಸಲಾಗಿದೆ. ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಿ 250 ಕೋಟಿ ರೂ. ವೆಚ್ಚದಲ್ಲಿ ಎರಡನೇ ಹಂತದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.