ಬ್ರೇಕಿಂಗ್ : ಉಕ್ರೇನ್ ನಲ್ಲಿ ಭಾರತೀಯ ಮತ್ತೊಬ್ಬ ವಿದ್ಯಾರ್ಥಿಗೆ ಗುಂಡೇಟು

ಬ್ರೇಕಿಂಗ್ : ಉಕ್ರೇನ್ ನಲ್ಲಿ ಭಾರತೀಯ ಮತ್ತೊಬ್ಬ ವಿದ್ಯಾರ್ಥಿಗೆ ಗುಂಡೇಟು

ಉಕ್ರೇನ್ ನ ಮೇಲೆ ರಷ್ಯಾ ದಾಳಿ ಮುಂದುವರೆದಿದ್ದು ಸದ್ಯ ಕೀವ್ ನಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿಗೆ ಗುಂಡು ತಗುಲಿ ಆಸ್ಪತ್ರೆ ಪಾಲಾಗಿರು ಬಗ್ಗೆ ಕೇಂದ್ರ ಸಚಿವ ವಿ.ಕೆ.ಸಿಂಗ್ ಮಾಹಿತಿ ನೀಡಿದ್ದಾರೆ. ಕೀವ್ನಲ್ಲಿ ನಮ್ಮ ವಿದ್ಯಾರ್ಥಿ ಒಬ್ಬರಿಗೆ ಸೇನೆಯ ಗುಂಡು ತಗುಲಿದೆ ಅನ್ನೋ ಮಾಹಿತಿ ಸಿಕ್ಕಿದೆ. ಕೂಡಲೇ ಅವರನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲರನ್ನೂ ಸುರಕ್ಷಿತ ಸ್ಥಳಕ್ಕೆ ಶಿಫ್ಟ್ ಮಾಡುವ ಕೆಲಸ ನಡೆಯುತ್ತಿದೆ ಎಂದು ವಿಕೆ ಸಿಂಗ್ ಮಾಹಿತಿ ನೀಡಿದ್ದಾರೆ. ಆದರೆ ಗಾಯಗೊಂಡಿರುವ ವಿದ್ಯಾರ್ಥಿ ಯಾರು ಸೇರಿದಂತೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.