ಇನ್ಮುಂದೆ ಮಾರ್ಚ್ 16 ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆ : C.M.ಘೋಷಣೆ

ಇನ್ಮುಂದೆ ಮಾರ್ಚ್ 16 ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆ : C.M.ಘೋಷಣೆ

ಬೆಂಗಳೂರು : ಇನ್ಮುಂದೆ ರಾಜ್ಯಾದ್ಯಂತ ಮಾರ್ಚ್ 16 ರಂದು ಜಗದ್ಗುರು ಶ್ರೀರೇಣುಕಾಚಾರ್ಯ ಜಯಂತಿ ಆಚರಿಸಲಾಗುತ್ತದೆ ಎಂದು ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಸಂಬಂಧ ಇಂದು ಸರ್ಕಾರ ಆದೇಶ ಹೊರಡಿಸಿದ್ದು ಶ್ರೀರೇಣುಕಾಚಾರ್ಯರು 'ಸಿದ್ಧಾಂತ ಶಿಖಾಮಣಿ' ಯಂತಹ ಮಹಾನ್ ಗ್ರಂಥವನ್ನು ಕೊಡುಗೆಯಾಗಿ ನೀಡಿದ್ದಾರೆ. ಸಾಮರಸ್ಯ, ಸಹಬಾಳ್ವೆ, ಸೌಹಾರ್ದತೆಯ ಬದುಕನ್ನು ಅವರು ಬೋಧಿಸಿದ್ದಾರೆ. ಕರ್ನಾಟಕ ಸೇರಿ ದಕ್ಷಿಣ ಭಾರತದಾದ್ಯಂತ ಲಕ್ಷಾಂತರ ಭಕ್ತ ಸಮೂಹ ಹೊಂದಿದ್ದಾರೆ. ಈ ಹಿನ್ನೆಲೆ ಅವರ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸುವಂತೆ ಕಲಬುರಗಿಯ ಅಖಿಲ ಭಾರತ ವೀರಶೈವ ಮಹಾಸಭಾ ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ಇದರ ಆಧಾರದ ಮೇಲೆ ಸರ್ಕಾರ ಶ್ರೀ ರೇಣುಕಾಚಾರ್ಯ ಜಯಂತಿನ ಪ್ರತಿ ವರ್ಷ ಆಚರಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ ಹೊರಡಿಸಿದೆ.