ಮತ್ತೊಂದು ವಿಶ್ವದಾಖಲೆ ಬರೆದ ಕಿಂಗ್ ಕೊಹ್ಲಿ

ಅಡಿಲೇಡ್: ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಟಿ20 ವಿಶ್ವಕಪ್‌ನಲ್ಲಿ ಅಬ್ಬರ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿದ್ದಾರೆ. ಇದರೊಂದಿಗೆ ಇಂದು (ಬುಧವಾರ) ಟಿ20 ವಿಶ್ವಕಪ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಸಿಡಿಸಿದ ವಿಶ್ವದಾಖಲೆಯನ್ನು ಕೂಡ ಮುರಿದಿದ್ದಾರೆ.
ಹೌದು. ಬಾಂಗ್ಲಾದೇಶ ವಿರುದ್ಧದ ಇನ್ನಿಂಗ್ಸ್‌ನಲ್ಲಿ ವಿರಾಟ್ ಕೊಹ್ಲಿ ಟಿ20 ವಿಶ್ವಕಪ್‌ನಲ್ಲಿ ಶ್ರೀಲಂಕಾದ ಮಾಜಿ ನಾಯಕ ಮಹೇಲಾ ಜಯವರ್ಧನಾ ಅವರ 1,016 ರನ್‌ಗಳ ದಾಖಲೆಯನ್ನು ಹಿಂದಿಕ್ಕಿದರು. ಕೊಹ್ಲಿ ಕೇವಲ 23 ಇನ್ನಿಂಗ್ಸ್‌ಗಳಲ್ಲಿ ಜಯವರ್ಧನಾ ಅವರ ದಾಖಲೆಯನ್ನು ದಾಟಿದರು. ಇನ್ನು ಈ ಪಟ್ಟಿಯಲ್ಲಿ ವೆಸ್ಟ್ ಇಂಡೀಸ್ ದೈತ್ಯ ಕ್ರಿಸ್ ಗೇಲ್ ಮೂರನೇ ಸ್ಥಾನದಲ್ಲಿ ಇದ್ದಾರೆ. ಅವರು ಟಿ20 ವಿಶ್ವಕಪ್‌ನಲ್ಲಿ 965 ರನ್ ಕಲೆಹಾಕಿದ್ದಾರೆ.