ಬ್ರೇಕಿಂಗ್: ಇಡಿಯಿಂದ ಅರವಿಂದ್ ಕೇಜ್ರಿವಾಲ್ ಅರೆಸ್ಟ್

ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಬಂಧಿಸಿದ್ದಾರೆ.
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ನಿವಾಸಕ್ಕೆ ಆಗಮಿಸಿದ್ದ ಇಡಿ ಅಧಿಕಾರಿಗಳು ಕೆಲ ಹೊತ್ತು ವಿಚಾರಣೆ ಹಾಗೂ ಮನೆಯಲ್ಲಿ ಪರಿಶೀಲನೆ ನಡೆಸಿದರು. ಬಳಿಕ ಅವರನ್ನು ಬಂಧಿಸಿದ್ದಾರೆ.
ಅಬಕಾರಿ ನೀತಿ ಹಗರಣದ ತನಿಖೆ ನಡೆಸುತ್ತಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು, ಅರವಿಂದ್ ಕೇಜ್ರಿವಾಲ್ ಬಂಧನಕ್ಕೆ ಕೋರಿದ್ದರು. ಆದರೆ ತಮ್ಮನ್ನು ಬಂಧಿಸದಂತೆ ಇಡಿಗೆ ನಿರ್ದೇಶನ ನೀಡುವಂತೆ ಕೋರಿ ಕೇಜ್ರಿವಾಲ್ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು. ಇನ್ನು ಅರವಿಂದ್ ಕೇಜ್ರಿವಾಲ್ ಮನವಿ ತಿರಸ್ಕರಿಸಿದ್ದ ಹೈಕೋರ್ಟ್, ಅವರನ್ನು ಯಾಕೆ ಬಂಧಿಸಿಲ್ಲ ಅಂತ ಇಡಿ ಅಧಿಕಾರಿಗಳನ್ನು ಪ್ರಶ್ನಿಸಿತ್ತು. ಈ ಹಿನ್ನೆಲೆಯಲ್ಲಿ ಕೇಜ್ರಿವಾಲ್ ನಿವಾಸಕ್ಕೆ ಇಂದು ತೆರಳಿದ್ದ ಇಡಿ ಅಧಿಕಾರಿಗಳು, ವಿಚಾರಣೆ ನಡೆಸಿದರು. ಆದರೆ ಸಮರ್ಪಕ ಉತ್ತರ ಸಿಗದ ಹಿನ್ನೆಲೆಯಲ್ಲಿ ಕೇಜ್ರಿವಾಲ್ ಅವರನ್ನು ಬಂಧಿಸಿದ್ದಾರೆ.