ನವದೆಹಲಿ : ಅರವಿಂದ್ ಕೇಜ್ರಿವಾಲ್ ಮಹತ್ವದ ಘೋಷಣೆ

ನವದೆಹಲಿ : ಐದು ರಾಜ್ಯಗಳ ಚುನಾವಣಾ ವೇಳಾಪಟ್ಟಿ ಬಿಡುಗಡೆ ಬಳಿಕ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮಹತ್ವದ ಘೋಷಣೆ ಮಾಡಿದ್ದಾರೆ.
ಎಂಪಿ, ಛತ್ತೀಸ್‌ಗಢ ಮತ್ತು ರಾಜಸ್ಥಾನ ಚುನಾವಣೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಸ್ಪರ್ಧಿಸುವುದಾಗಿ ಪ್ರಕಟಿಸಿದ್ದಾರೆ. ಶೀಘ್ರ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದಿದ್ದಾರೆ. ಆದರೆ ಏಕಾಂಗಿ ಸ್ಪರ್ಧೆಯೇ? ಇಂಡಿಯಾ ಮೈತ್ರಿಕೂಟದ ಭಾಗವೇ? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಏನೇ ನಡೆದರೂ ತಿಳಿಸುತ್ತೇನೆ ಎಂದಿದ್ದಾರೆ.