ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅರವಿಂದರ್ ಸಿಂಗ್ ಲವ್ಲಿ ರಾಜೀನಾಮೆ

ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅರವಿಂದರ್ ಸಿಂಗ್ ಲವ್ಲಿ ರಾಜೀನಾಮೆ

ನವದೆಹಲಿ: ಲೋಕಸಭೆ ಚುನಾವಣೆ ಹೊತ್ತಿನಲ್ಲೇ ಕಾಂಗ್ರೆಸ್‌ಗೆ ಆಘಾತವಾಗಿದೆ. ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅರವಿಂದರ್ ಸಿಂಗ್ ಲವ್ಲಿ ರಾಜೀನಾಮೆ ನೀಡಿದ್ದಾರೆ. 

ಇಂದು ತಮ್ಮ ರಾಜೀನಾಮೆ ಪ್ರಕಟಿಸಿರುವ ಅರವಿಂದರ್‌, ಕಾಂಗ್ರೆಸ್‌ ಹಾಗೂ ಎಎಪಿ ಮೈತ್ರಿ ಅಸಂವಿಧಾನಿಕ ಎಂದು ಹೇಳಿದ್ದಾರೆ. ಕಾಂಗ್ರೆಸ್‌ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುವ ಮೂಲಕ ಎಎಪಿ ಜನ್ಮ ಪಡೆಯಿತು. ಕಾಂಗ್ರೆಸ್‌ ಪಕ್ಷವನ್ನು ಟೀಕಿಸುತ್ತಲೇ ಅಧಿಕಾರದ ಗದ್ದುಗೆ ಕೂಡ ಏರಿತು. ಕಾಂಗ್ರೆಸ್‌ ವಿರುದ್ಧ ದ್ವೇಷವನ್ನು ಹರಡುತ್ತಲೇ ಅಧಿಕಾರ ಭದ್ರ ಪಡಿಸಿಕೊಂಡಿತು. ಇಂತಹ ಪಕ್ಷದ ಜೊತೆ ಕಾಂಗ್ರೆಸ್‌ ಮೈತ್ರಿ ಮಾಡಿಕೊಂಡಿತು. ಇದು ನನ್ನಂತ ನಿಷ್ಠಾವಂತ ಕಾರ್ಯಕರ್ತರರಿಗೆ ಬೇಸರ ತರಿಸಿದೆ. ಅದೇ ಕಾರಣಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿಕೊಂಡಿದ್ದಾರೆ.