ಆರ್ಯನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ.. ನಟನ ಪುತ್ರನಿಗೆ ಜೈಲೇಗತಿ…

ಆರ್ಯನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ.. ನಟನ ಪುತ್ರನಿಗೆ ಜೈಲೇಗತಿ…

ಮುಂಬೈ : ಕ್ರೂಸ್ ನಲ್ಲಿ ಡ್ರಗ್ಸ್ ಪಾರ್ಟಿ ಆರೋಪದ ಮೇಲೆ ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ನ್ಯಾಯಾಂಗ ಬಂಧನದಲ್ಲಿದ್ದಾನೆ. ಪ್ರಕರಣದ ವಿಚಾರಣೆ ನಡೆಸಿದ ಮುಂಬೈನ ಕಿಲ್ಲಾ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿತ್ತು. ಅಲ್ಲದೇ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಬಳಿಕ ಎನ್ ಡಿ ಪಿಎಸ್ ವಿಶೇಷ ಕೋರ್ಟ್ ಗೆ ಜಾಮೀನಿಗಾಗಿ ಮೇಲ್ಮನವಿಯನ್ನು ಸಲ್ಲಿಸಲಾಗಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಸ್ಪೆಷಲ್ ಕೋರ್ಟ್, ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿಕೆ ಮಾಡಿದೆ. ಹೀಗಾಗಿ ಆರ್ಯನ್ ಗೆ ಬುಧವಾರದವರೆಗೂ ಜೈಲೇಗತಿ.