Asia Cup 2025: ಭಾರತದ ಬೌಲಿಂಗ್ ದಾಳಿಗೆ ನಲುಗಿದ ಪಾಕ್ ; ಟೀಂ ಇಂಡಿಯಾಗೆ 7 ವಿಕೆಟ್‌ಗಳ ಭರ್ಜರಿ ಜಯ

Asia Cup 2025: ಭಾರತದ ಬೌಲಿಂಗ್ ದಾಳಿಗೆ ನಲುಗಿದ ಪಾಕ್ ; ಟೀಂ ಇಂಡಿಯಾಗೆ 7 ವಿಕೆಟ್‌ಗಳ ಭರ್ಜರಿ ಜಯ

ದುಬೈ: ಇಲ್ಲಿ ನಡೆಯುತ್ತಿರುವ ಏಷ್ಯಾ ಕಪ್‌ 2025ರ ಟೂರ್ನಿಯ ಪಾಕ್‌ ವಿರುದ್ಧದ ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಟೀಂ ಇಂಡಿಯಾದ ಬೌಲಿಂಗ್‌ ಮತ್ತು ಬ್ಯಾಟಿಂಗ್‌ ಅಬ್ಬರಕ್ಕೆ ಪಾಕ್‌ ಮಣಿದಿದೆ. 

ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಪಾಕಿಸ್ತಾನ 9 ವಿಕೆಟ್‌ ನಷ್ಟಕ್ಕೆ 127 ರನ್‌ ಗಳಿಸಿತು. ಭಾರತ ತಂಡ 15.4 ಓವರ್‌ಗೆ 3 ವಿಕೆಟ್‌ ನಷ್ಟಕ್ಕೆ ಗುರಿ ತಲುಪಿ ಗೆದ್ದು ಬೀಗಿದೆ.