ಸಿಲಿಕಾನ್ ಸಿಟಿ ಜನರೇ ಗಮನಿಸಿ - ಕುಡಿಯುವ ನೀರು ಪೋಲು ಮಾಡಿದ್ರೆ ಬೀಳುತ್ತೆ ದಂಡ

ಬೆಂಗಳೂರು : ರಾಜ್ಯಾದ್ಯಂತ ನೀರಿನ ಬಿಕ್ಕಟ್ಟು ದಿನೇ ದಿನೇ ಹೆಚ್ಚಾಗುತ್ತಿರುವುದರಿಂದ ಬೆಂಗಳೂರು ನಗರದಲ್ಲಿ ವಾಹನ ತೊಳೆಯುವುದು, ತೋಟಗಾರಿಕೆ, ನಿರ್ಮಾಣ ನಿರ್ವಹಣೆ ಸೇರಿದಂತೆ ಇತರೆ ಉದ್ದೇಶಗಳಿಗೆ ಕುಡಿಯುವ ನೀರನ್ನು ಬಳಸುವುದನ್ನು ನಿಷೇಧಿಸಲಾಗಿದೆ.
ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ವಾಹನ ತೊಳೆಯಲು, ಕೈದೋಟ, ತೋಟಗಾರಿಕೆ, ನೀರಿನ ಕಾರಂಜಿ, ಸಿನೆಮಾ ಮಂದಿರ, ಮಾಲ್ ಗಳಲ್ಲಿ ಕುಡಿಯುವ ನೀರಿನ ಹೊರತು ಇತರ ಉದ್ದೇಶಗಳಿಗೆ ಬಳಕೆ ಮತ್ತು ಕಟ್ಟಡ, ರಸ್ತೆಗಳ ನಿರ್ಮಾಣ, ನಿರ್ವಹಣೆಗೆ ಕುಡಿಯುವ ನೀರನ್ನು ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ.
ಈ ನಿಯಮ ಉಲ್ಲಂಘಿಸಿದರೆ 5,000 ರೂಪಾಯಿ ದಂಡ ವಿಧಿಸಲಾಗುತ್ತದೆ. ಪದೇ ಪದೇ ನಿಯಮ ಉಲ್ಲಂಘಿಸಿದರೆ 5,000 ರೂಪಾಯಿ ದಂಡ ದೊಂದಿಗೆ ಪ್ರತಿ ದಿನಕ್ಕೆ 500 ರೂ. ದಂಡ ವಿಧಿಸುವುದಾಗಿ ಎಚ್ಚರಿಸಿದೆ.