ಸತತ 3ನೇ ಬಾರಿಗೆ ಮಹಿಳಾ ಟಿ20 ವಿಶ್ವಕಪ್ ಗೆದ್ದ ಆಸ್ಟ್ರೇಲಿಯಾ

ಕೇಪ್ ಟೌನ್: ನ್ಯೂಲ್ಯಾಂಡ್ಸ್‌ನ ಕೇಪ್ ಟೌನ್‌ನಲ್ಲಿ ನಡೆದ ಮಹಿಳೆಯರ ಟಿ20 ವಿಶ್ವಕಪ್ 2023 ಫೈನಲ್‌ನಲ್ಲಿ ಆಸ್ಟ್ರೇಲಿಯಾ ಆತಿಥೇಯ ದಕ್ಷಿಣ ಆಫ್ರಿಕಾವನ್ನು ಸೋಲಿಸಿ ಸತತ ಮೂರನೇ ಬಾರಿಗೆ ಮಹಿಳಾ T20 ವಿಶ್ವಕಪ್ ಗೆದ್ದು ಬೀಗಿದೆ.
ಈ ಮೂಲಕ ಆಸ್ಟ್ರೇಲಿಯಾ ಮಹಿಳಾ ತಂಡವು ಈವರೆಗೂ ಒಟ್ಟು ಆರು ಬಾರಿ ಟಿ20 ಟೂರ್ನಿಯನ್ನು ಗೆದ್ದಿದೆ. ಫೈನಲ್‌ನಲ್ಲಿ ಬೆತ್ ಮೂನಿ 74*(53) ರನ್‌ಗಳೊಂದಿಗೆ ಆಸ್ಟ್ರೇಲಿಯಾ ಪರ ಗರಿಷ್ಠ ಸ್ಕೋರ್ ಮಾಡಿದರು. ಗಮನಾರ್ಹ ಸಂಗತಿ ಎಂದರೆ ದಕ್ಷಿಣ ಆಫ್ರಿಕಾ ಮಹಿಳಾ ತಂಡವು ಮೊದಲ ಬಾರಿಗೆ ವಿಶ್ವಕಪ್ ಫೈನಲ್‌ನಲ್ಲಿ ಕಾಣಿಸಿಕೊಂಡಿದೆ.