ಬೆಂಗಳೂರು: 58 ನಗರ ಸ್ಥಳೀಯ ಸಂಸ್ಥೆಗಳಿಗೆ ಎಲೆಕ್ಷನ್ ಎನೌನ್ಸ್ ಮಾಡಿದ ಆಯೋಗ

ಬೆಂಗಳೂರು: ಅವಧಿ ಮುಕ್ತಾಯ ಹಿನ್ನೆಲೆಯಲ್ಲಿ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದೆ. ಡಿಸೆಂಬರ್ 27 ರಂದು ಸ್ಥಳೀಯ ಸಂಸ್ಥೆಗಳಿಗೆ ಮತದಾನ ನಡೆಯಲಿದೆ. 5 ನಗರಸಭೆ, 19 ಪುರಸಭೆ, 34 ಪಂಚಾಯತ್‌ಗೆ ಚುನಾವಣೆ ನಡೆಯಲಿದ್ದು ಸ್ಥಳೀಯ ಸಂಸ್ಥೆಗಳ 1,185 ವಾರ್ಡ್‌ಗಳಿಗೆ ಮತದಾನ ನಡೆಯಲಿದ್ದು ನಾಮಪತ್ರ ಸಲ್ಲಿಸಲು ಡಿಸೆಂಬರ್ 15 ಕೊನೆಯ ದಿನವಾಗಿದ್ದು, ನಾಮಪತ್ರ ವಾಪಸ್ ಪಡೆಯಲು ಡಿಸೆಂಬರ್ 18 ಕೊನೆಯ ದಿನವಾಗಿದೆ. ಡಿಸೆಂಬರ್ 30 ರಂದು ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.