ಬೆಂಗಳೂರು ಮಳೆ ಅವಾಂತರ - ಸಂಜೆ ಸಿಎಂ ಸಿದ್ದರಾಮಯ್ಯರಿಂದ ಸಿಟಿ ರೌಂಡ್ಸ್

ಬೆಂಗಳೂರು ಮಳೆ ಅವಾಂತರ - ಸಂಜೆ ಸಿಎಂ ಸಿದ್ದರಾಮಯ್ಯರಿಂದ ಸಿಟಿ ರೌಂಡ್ಸ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕಳೆದೆರಡು ದಿನಗಳಿಂದ ಮಳೆ ಸುರಿದ ಹಿನ್ನೆಲೆಯಲ್ಲಿ ಹಲವು ತಗ್ಗು ಪ್ರದೇಶಗಳು ಜಲಾವೃತವಾಗಿ ಮನೆಗಳಿಗೆ ನೀರು ನುಗ್ಗಿ ಸಾಕಷ್ಟು ಅವಾಂತರ ಸೃಷ್ಟಿಸಿದೆ. ರಾಜ್ಯ ಸರ್ಕಾರ ಬ್ರ್ಯಾಂಡ್ ಬೆಂಗಳೂರು ಮಾಡೋಕೆ ಹೋಗಿ ವಾಟರ್ ಬೆಂಗಳೂರು ಮಾಡಿದೆ ಎಂದು ವಿಪಕ್ಷಗಳು ರಾಜ್ಯ ಸರ್ಕಾರದ ವಿರುದ್ಧ ತೀವ್ರವಾಗಿ ತರಾಟೆಗೆ ತಗೆದುಕೊಳ್ಳುತ್ತಿವೆ. ಅದು ಅಲ್ಲದೇ ನಾಳೆ ರಾಜ್ಯ ಸರ್ಕಾರದ ಎರಡು ವರ್ಷ ಪುರೈಸುತ್ತಿರುವ ಹಿನ್ನೆಲೆಯಲ್ಲಿ ಬೃಹತ್ ಸಾಧನಾ ಸಮಾವೇಶವನ್ನ ಹೊಸಪೇಟೆಯಲ್ಲಿ ಮಾಡುತ್ತಿದೆ‌. ಬೆಂಗಳೂರು ಮಳೆಗೆ ಮುಳುಗುತ್ತಿದ್ದರೆ ಇವರು ಸಾಧನಾ ಸಮಾವೇಶ ಮಾಡ್ತಿದ್ದಾರೆ ಎಂದು ವಿಪಕ್ಷಗಳು ಟೀಕಿಸುತ್ತಿವೆ. 

ರಸ್ತೆಗಳೆಲ್ಲ ಜಲಾವೃತವಾಗಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲೂ ಸರ್ಕಾರದ ವಿರುದ್ಧ ತೀವ್ರವಾಗಿ ಟೀಕೆ ವ್ಯಕ್ತವಾಗುತಿತ್ತು. ಇದ್ರ ಬೆನ್ನಲ್ಲೇ ಎಲ್ಲಡೆ ಟೀಕಿ ಹೆಚ್ಚಾಗುತ್ತಿರುವ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಖುದ್ದು ಬೆಂಗಳೂರು ಸಿಟಿ ರೌಂಡ್ಸ್ ಹೊರಡೋಕೆ ಸಿದ್ಧರಾಗಿದ್ದಾರೆ. ಇಂದು ಸಂಜೆ 4.30 ಗಂಟೆಗೆ ಕಾವೇರಿ ನಿವಾಸದಿಂದ ಬೆಂಗಳೂರಿನ ಅಧಿಕಾರಿಗಳ ಜೊತೆ ಮಳೆ ಹಾನಿ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಮಳೆಯಿಂದ ಹಾನಿಗೊಳಗದ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸುವ ಸಾಧ್ಯತೆ. ಮತ್ತೆ ಮುಂದೆ ಈ ರೀತಿ ಅವಾಂತರ ಸೃಷ್ಟಿಯಾಗದಂತೆ ತಡೆಯಲು ಬೇಕಾದ ಕ್ರಮಕ್ಕೆ ಸೂಚಿಸುವ ಸಾಧ್ಯತೆ ಇದೆ.