ಬೆಂಗಳೂರು: ಟ್ರಾಫಿಕ್ ಪೊಲೀಸ್ ಕಮಿಷನರ್ ಮನೆಯಲ್ಲಿಯೇ ಕಳ್ಳತನ

ಬೆಂಗಳೂರು: ಟ್ರಾಫಿಕ್ ಪೊಲೀಸ್ ಕಮಿಷನರ್ ಮನೆಯಲ್ಲಿಯೇ ಕಳ್ಳತನ

ಬೆಂಗಳೂರು: ಸಂಚಾರ ವಿಭಾಗದ ಜಂಟಿ ಆಯುಕ್ತ ಡಾ. ಬಿ.ಆರ್. ರವಿಕಾಂತೇಗೌಡ ಅವರ ಮನೆಯಲ್ಲಿ ಕಳ್ಳತನವಾಗಿದ್ದು, ಈ ಕುರಿತು ಸಂಜಯ ನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಸಂಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರವಿಕಾಂತೇಗೌಡ ಅವರ ಮನೆ ಇದೆ. ಡಾ.ಬಿ.ಆರ್ ರವಿಕಾಂತೇಗೌಡ ಮನೆಯಲ್ಲಿನ ಮೊಬೈಲ್ ಸೇರಿದಂತೆ ಇನ್ನಿತರ ವಸ್ತುಗಳು ನಾಪತ್ತೆಯಾಗಿದ್ದು, ಸಂಜಯನಗರದ ಕಮಿಷನರ್ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಕೆಲಸದಾಕೆಯೇ ಮೇಲೆಯೇ ಶಂಕೆ ವ್ಯಕ್ತವಾಗಿದೆ. ಕಳ್ಳತನ ನಡೆದ ಬಳಿಕ ಮಹಿಳೆ ನಾಪತ್ತೆಯಾಗಿದ್ದು, ಮಹಿಳೆ ವಿರುದ್ಧ ದೂರು ದಾಖಲಿಸಲಾಗಿದೆ. ಸದ್ಯ ಸಂಜಯನಗರ ಪೊಲೀಸರು ದೂರು ಪರಿಶೀಲಿಸುತ್ತಿದ್ದಾರೆ. ಕಳೆದ ಶನಿವಾರ ಘಟನೆ ನಡೆದಿದ್ದು, ನಿವಾಸದಲ್ಲಿ ಮನೆಯ ಕಾರು ಚಾಲಕ ಜಗದೀಶ್ ನೀಡಿದ ದೂರಿನನ್ವಯ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.