ಬೆಂಗ್ಳೂರಿನಲ್ಲಿ ಮತ್ತೊಂದು ಘೋರ ದುರಂತ; ಸಿಲಿಂಡರ್ ಸ್ಫೋಟಕ್ಕೆ ಮೂವರು ಬಲಿ.?

ಬೆಂಗ್ಳೂರಿನಲ್ಲಿ ಮತ್ತೊಂದು ಘೋರ ದುರಂತ; ಸಿಲಿಂಡರ್ ಸ್ಫೋಟಕ್ಕೆ ಮೂವರು ಬಲಿ.?

ಬೆಂಗಳೂರು: ಬನ್ನೇರುಘಟ್ಟ ರಸ್ತೆಯಲ್ಲಿರುವ ದೇವರ ಚಿಕ್ಕನಹಳ್ಳಿಯ ಅಪಾರ್ಟ್‌ಮೆಂಟ್‌ನ ಫ್ಲ್ಯಾಟ್‌ನಲ್ಲಿ ನಡೆದ ಅಗ್ನಿ ದುರಂತದಲ್ಲಿ ತಾಯಿ- ಮಗಳು ಸಜೀವ ದಹನಗೊಂಡಿದ್ದರು. ಈ ಘಟನೆ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ ಸಂಭವಿಸಿದೆ. ಸಿಲಿಕಾನ್ ಸಿಟಿ ಬೆಂಗಳೂರಿನ ನಗರ್ತಪೇಟೆಯಲ್ಲಿ ಗ್ಯಾಸ್‌ ಸಿಲಿಂಡರ್ ಸ್ಫೋಟಗೊಂಡು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಷ್ಟೇ ಅಲ್ಲದೆ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಫೋಟದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಸ್ಫೋಟಕ್ಕೆ ಕಾರಣ ಏನು? ಮೃತರು ಯಾರು? ಸೇರಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.