ಬೆಂಗಳೂರು: ಮಳೆ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿರುವಂತೆ ಅಧಿಕಾರಿಗಳಿಗೆ ಬಿಬಿಎಂಪಿ ಸೂಚನೆ

ಬೆಂಗಳೂರು: ಮಳೆ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿರುವಂತೆ ಅಧಿಕಾರಿಗಳಿಗೆ ಬಿಬಿಎಂಪಿ ಸೂಚನೆ

ಬೆಂಗಳೂರು: ಹವಾಮಾನ ಇಲಾಖೆಯ ಮುನ್ಸೂಚನೆ ಹಿನ್ನೆಲೆ ಈ ತಿಂಗಳ ಮೊದಲ ವಾರದಲ್ಲಿ ಮಳೆ ಬೀಳುವ ಸಾಧ್ಯತೆ ಇದ್ದು, ಅದಕ್ಕಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಬಿಬಿಎಂಪಿ ತಯಾರಿ ಮಾಡಿಕೊಂಡಂತಿದೆ. 

ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಯಲ್ಲಿ ನಿನ್ನೆ ರಾತ್ರಿ ಭಾರೀ ಪ್ರಮಾಣದಲ್ಲಿ ಮಳೆ ಬಿದ್ದಿದ್ದರಿಂದ ಬೆಂಗಳೂರಿನ ಹಲವು ತಗ್ಗು ಪ್ರದೇಶಗಳ ಮನೆಗಳಲ್ಲಿ ನೀರು ತುಂಬಿಕೊಂಡು ಜನಜೀವನ ದುಸ್ತರವಾಗಿತ್ತು. ಈ ಹಿನ್ನೆಲೆ ಇಂದಿನಿಂದ ಒಂದು ವಾರಗಳ ಕಾಲ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ಬಿಬಿಎಂಪಿಯ ಎಲ್ಲ ಎಂಟೂ ವಲಯಗಳ ಸಂಬಂಧಿಸಿದ ಅಧಿಕಾರಿ ವರ್ಗದ ಇಪ್ಪತ್ನಾಲ್ಕು ಗಂಟೆಗಳ ಕಾಲ ವಿಕೋಪ ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧರಾಗಿರಬೇಕೆಂದು ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಅವರು ಸೂಚನೆ ನೀಡಿದ್ದಾರೆ. 

ಈ ಬಗ್ಗೆ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ರಾತ್ರಿ ಸುರಿದ ಬಾರಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಮುಖ್ಯ ಅಭಿಯಂತರರು ಭೇಟಿ ನೀಡಿ ಸಾರ್ವಜನಿಕರ ಅಹವಾಲುಗಳಿಗೆ ಕೂಡಲೇ ಸ್ಪಂದಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಖಡಕ್ ಸಂದೇಶ ನೀಡಿದರು.