ಬೆಂಗಳೂರು : 3 ವರ್ಷಗಳ ಒಳಗಾಗಿ ಚಿತ್ರನಗರಿ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸಲು ಸಿಎಂ ಸೂಚನೆ

ಬೆಂಗಳೂರು : 3 ವರ್ಷಗಳ ಒಳಗಾಗಿ ಚಿತ್ರನಗರಿ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸಲು ಸಿಎಂ ಸೂಚನೆ

ಬೆಂಗಳೂರು : ಮೈಸೂರಿನಲ್ಲಿ ನಿರ್ಮಾಣವಾಗುತ್ತಿರುವ ಚಿತ್ತನಗರಿಯನ್ನ ಮೂರು ವರ್ಷಗಳ ಒಳಗಾಗಿ ಪೂರ್ಣಗೊಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಮೈಸೂರು ಜಿಲ್ಲೆಯ ಇಮ್ಮಾವು ಗ್ರಾಮದಲ್ಲಿ ಚಿತ್ರನಗರಿ ನಿರ್ಮಿಸುವ ಕುರಿತು ನಡೆದ ಹಿರಿಯ ಅಧಿಕಾರಿಗಳ ಸಭೆ ಯಲ್ಲಿ ಸಿಎಂ ಸೂಚಿಸಿದ್ದಾರೆ. 

ಮೈಸೂರು ಜಿಲ್ಲೆಯ ಇಮ್ಮಾವು ಗ್ರಾಮದಲ್ಲಿ ಈಗಾಗಲೇ ಗುರುತಿಸಲಾಗಿರುವ 110 ಎಕರೆ ಕೆಐಎಡಿಬಿ ಭೂಮಿಯನ್ನು ಆದಷ್ಟು ಬೇಗನೆ, ವಾರ್ತಾ ಮತ್ತು ಸಾರ್ವಜನಿಕ ಇಲಾಖೆಗೆ ಹಸ್ತಾಂತರಿಸಿ ಆದೇಶ ಹೊರಡಿಸಲು ಸೂಚಿಸಿದರು. ಚಿತ್ರರಂಗದವರ ಅಭಿಪ್ರಾಯಗಳನ್ನು ಸಹ ಪಡೆದುಕೊಂಡು, ಎಲ್ಲಾ ಸೌಲಭ್ಯಗಳು ಒಳಗೊಂಡಿರುವ ಚಿತ್ರನಗರ ನಿರ್ಮಾಣವಾಗಬೇಕು ಎಂದು ಹೇಳಿದರು. 

ಹೈದ್ರಾಬಾದ್‌ನಲ್ಲಿರುವ ರಾಮೋಜಿ ಫಿಲ್ಮ್‌ ಸಿಟಿ ಮಾದರಿಯಲ್ಲಿ ಚಿತ್ರನಗರಿ ನಿರ್ಮಾಣವಾಗಬೇಕು. ಸಿನೆಮಾ ಜಗತ್ತಿನ ಬೇಡಿಕೆಗೆ ಅನುಗುಣವಾಗಿ ಅತ್ಯಾಧುನಿಕ ತಂತ್ರಜ್ಞಾನ ಸೌಲಭ್ಯ ಇಲ್ಲಿ ಲಭ್ಯವಿರಬೇಕು. ಈ ಕುರಿತು ದೇಶದ ಪ್ರಮುಖ ಮೂರು ಚಿತ್ರನಗರಿಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಲು ಸಿಎಂ ಸೂಚನೆ ನೀಡಿದರು.