ಬೆಂಗಳೂರು : ಆಶಾ ಕಾರ್ಯಕರ್ತೆಯಾರ ಗೌರವ ಧನ 7 ಸಾವಿರಕ್ಕೆ ಏರಿಕೆ!

ಬೆಂಗಳೂರು : ಆಶಾ ಕಾರ್ಯಕರ್ತೆಯಾರ ಗೌರವ ಧನ 7 ಸಾವಿರಕ್ಕೆ ಏರಿಕೆ!

ಬೆಂಗಳೂರು : ಆಶಾ ಕಾರ್ಯಕರ್ತೆಯರ ಮಾಸಿಕ ಗೌರವ ಧನವನ್ನು 5 ಸಾವಿರದಿಂದ 7 ಸಾವಿರಕ್ಕೆ ಏರಿಕೆ ಮಾಡುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭರವಸೆ ನೀಡಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರು ವಿಧಾನ ಸೌಧ ಚಲೋ ಪ್ರತಿಭಟನೆ ನಡೆಯುತ್ತಿದ್ದು, ಸಚಿವ ದಿನೇಶ್ ಗುಂಡೂರಾವ್ ಸ್ಥಳಕೆ ಭೇಟಿ ನೀಡಿ, ಅಹವಾಲು ಆಲಿಸಿ ಸರ್ಕಾರ ನಿಮ್ಮ ಪರ ಇದೆ ಎಂದು ಹೇಳಿದರು. 

ಸರ್ಕಾರ ರಚನೆಗೂ ಮುನ್ನ ನೀಡಿದ 6ನೇ ಗ್ಯಾರೆಂಟಿ ಜಾರಿ ಮಾಡಲು, ಆರ್‌ಸಿಎಚ್ ಪೋರ್ಟಲ್ ನಿಂದ ದಿಲಿಂಕ್ ಮತ್ತು ಮಾಸಿಕ ಕನಿಷ್ಠ ಗೌರವ ಧನ 15,000 ಜೊತೆ ಇನ್ನಷ್ಟು ಬೇಡಿಕೆಗಳನ್ನು ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದರು. ಸರ್ಕಾರದಿಂದ ಈಗಾಗಲೇ ಗೃಹಲಕ್ಷ್ಮೀ ಯೋಜನೆಯಡಿ ನೀಡುವ 2 ಸಾವಿರ ರೂ. ಆಶಾ ಕಾರ್ಯಕರ್ತೆಯರಿಗೂ ಅನ್ವಯ ಆಗುವಂತೆ ಕ್ರಮ ಕೈಗೊಳ್ಳಲಾಗಿದೆ. 5 ಲಕ್ಷ ಆರೋಗ್ಯ ವಿಮೆಯನ್ನು ಆಶಾ ವರ್ಕರ್ಸ್‌ಗೆ ಕಲ್ಪಿಸಲಾಗಿದೆ ಎಂದು ಹೇಳಿ ಪ್ರತಿಭಟನೆ ಕೈ ಬಿಡುವಂತೆ ಮನವಿ ಮಾಡಿದರು.