ಬೆಂಗಳೂರು: ವಿಧಾನಸೌಧಕ್ಕೆ ವಿದ್ಯುತ್ ದೀಪಗಳ ಅಲಂಕಾರ

ಬೆಂಗಳೂರು: ವಿಧಾನಸೌಧದಲ್ಲಿ ನೂತನವಾಗಿ ಅಭಿವೃದ್ಧಿಪಡಿಸಲಾಗಿರುವ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಸಾರ್ವಜನಿಕರ ವೀಕ್ಷಣೆಗೆ ಅರ್ಪಿಸಿದ್ದಾರೆ.
ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ಅಳವಡಿಕೆ ಮಾಡಲಾದ ಬಣ್ಣಬಣ್ಣದ ವಿದ್ಯುತ್ ದೀಪಗಳು ಐತಿಹಾಸಿಕ ವಿಧಾನಸೌಧದ ಮೆರುಗನ್ನು ಹೆಚ್ಚಿಸುವ ಜೊತೆಗೆ ನೋಡಗರ ಕಣ್ಮನ ಸೆಳೆಯಲಿದೆ. ವಿಧಾನಸೌಧವೀಗ ನಿಸ್ಸಂಶಯವಾಗಿ ಮತ್ತಷ್ಟು ಸುಂದರ, ಮನಮೋಹಕವಾಗಿದೆ ಎಂದು ತಿಳಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್, ವಿಧಾನಸಭೆ ಸ್ಪೀಕರ್ ಯು ಟಿ ಖಾದರ್, ಸಚಿವರಾದ ಎಚ್ ಕೆ ಪಾಟೀಲ್, ಕೆ ಜೆ ಜಾರ್ಜ್, ಎಂಎಲ್ಸಿ ಗೋವಿಂದರಾಜ್, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮತ್ತಿತರರು ಭಾನುವಾರ ಭಾಗವಹಿಸಿದ್ದರು.