ಹುಬ್ಬಳ್ಳಿ: ನಾಳೆ ಭಾರತ್ ಬಂದ್ ಹಿನ್ನೆಲೆ: ಸಾಂಕೇತಿಕ ಪ್ರತಿಭಟನೆಗೆ ರೈತ ಸಂಘಟಗಳ ತೀರ್ಮಾನ...!

ಹುಬ್ಬಳ್ಳಿ: ನಾಳೆ ಭಾರತ್ ಬಂದ್ ಹಿನ್ನೆಲೆ: ಸಾಂಕೇತಿಕ ಪ್ರತಿಭಟನೆಗೆ ರೈತ ಸಂಘಟಗಳ ತೀರ್ಮಾನ...!

ಹುಬ್ಬಳ್ಳಿ: ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೊರ್ಚಾ ಕರೆ ನೀಡಿರುವ ಭಾರತ ಬಂದ್ ಗೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಹಲವು ಸಂಘಟನೆಗಳು ಬೆಂಬಲ ಸೂಚಿಸಿವೆ. ನಾಳೆ ಭಾರತ ಬಂದ್ ಗೆ ರೈತ ಪರ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು, ದಲಿತ ಪರ ಸಂಘಟನೆಗಳು, ಮಹಿಳಾ ಪರ ಸಂಘಟನೆಗಳು, ಆಟೋರಿಕ್ಷಾ ಚಾಲಕರ ಸಂಘಟನೆಗಳು ಹಾಗೂ ಕಾರ್ಮಿಕರ ಪರ ಸಂಘಟನೆಗಳಿಂದ ಬೆಂಬಲ ಸೂಚಿಸಿವೆ. ಇಂದಿರಾ ಗ್ಲಾಸ್ ಗೌಸ್ ನಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದು,ಚನ್ನಮ್ಮ ವೃತ್ತದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲಿವೆ. ಆದ್ರೆ ವಾಣಿಜ್ಯ ನಗರಿ ಹುಬ್ಬಳ್ಳಿ ಸೇರಿದಂತೆ ಧಾರವಾಡ ಜಿಲ್ಲೆಯಲ್ಲಿ ಯಾವುದೇ ಬಂದ್ ಇಲ್ಲ.ಕೇವಲ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಲಿರುವ ಸಂಘಟನೆಗಳು ತೀರ್ಮಾನಿಸಿವೆ.