ಗುಜರಾತ್‌: 2ನೇ ಬಾರಿಗೆ ಸಿಎಂ ಆಗಿ ಭೂಪೇಂದ್ರ ಪಟೇಲ್ ಆಯ್ಕೆ- ಸೋಮವಾರ ಪ್ರಮಾಣ ವಚನ ಸ್ವೀಕಾರ

ಗುಜರಾತ್‌: 2ನೇ ಬಾರಿಗೆ ಸಿಎಂ ಆಗಿ ಭೂಪೇಂದ್ರ ಪಟೇಲ್ ಆಯ್ಕೆ- ಸೋಮವಾರ ಪ್ರಮಾಣ ವಚನ ಸ್ವೀಕಾರ

ಅಹಮದಾಬಾದ್: ಶನಿವಾರ ನಡೆದ ಗುಜರಾತ್ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಭೂಪೇಂದ್ರ ಪಟೇಲ್ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. 

ಭೂಪೇಂದ್ರ ಪಟೇಲ್ ಅವರು ಗುಜರಾತ್ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಮತ್ತು ಸೋಮವಾರ (ಡಿಸೆಂಬರ್ 12ರಂದು) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ 182 ಸ್ಥಾನಗಳ ಪೈಕಿ ಬಿಜೆಪಿ 156 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ 17 ಸ್ಥಾನಗಳನ್ನು ಗೆದ್ದುಕೊಂಡಿದೆ. 

ಇಂದು ಗಾಂಧೀನಗರದಲ್ಲಿರುವ ರಾಜಭವನಕ್ಕೆ ಆಗಮಿಸಿದ ಭೂಪೇಂದ್ರ ಪಟೇಲ್, ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಈಗಾಗಲೇ ಬಿಜೆಪಿ ಹೈಕಮಾಂಡ್ ಗುಜರಾತ್ ಸಿಎಂ ಆಗಿ ಎರಡನೇ ಬಾರಿ ಭೂಪೇಂದ್ರ ಪಟೇಲ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಘೋಷಿಸಿದೆ. ಡಿಸೆಂಬರ್ 12ಕ್ಕೆ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿ ಹಿರಿಯ ನಾಯಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.