BIG BREAKING: ಮುಂದಿನ ಆದೇಶದವರಗೆ ಹಿಜಾಬ್ ನಿಷೇಧ- ಹೈಕೋರ್ಟ್‌ನಿಂದ ಮಧ್ಯಂತರ ಆದೇಶ

ಬೆಂಗಳೂರು: ಮುಂದಿನ ಆದೇಶದವರೆಗೆ ಹಿಜಾಬ್ ಅನ್ನು ನಿಷೇಧಿಸಲಾಗಿದೆ ಎಂದು ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠವು ಮಧ್ಯಂತರ ಆದೇಶ ಹೊರಡಿಸಿದೆ. ಶಾಲೆ- ಕಾಲೇಜುಗಳು ಶೀಘ್ರದಲ್ಲೇ ಆರಂಭಿಸಬೇಕು. ಆದರೆ ಅಂತಿಮ ಆದೇಶದವರೆಗೆ ಯಾವುದೇ ಧಾರ್ಮಿಕ ಉಡುಗೆಗಳನ್ನು ಧರಿಸಿ ಶಾಲೆ- ಕಾಲೇಜಿಗಳಲ್ಲಿ ಧರಿಸಲು ಅವಕಾಶವಿಲ್ಲ. ಮುಂದಿನ ವಿಚಾರಣೆ ಸೋಮವಾರ ಮಧ್ಯಾಹ್ನ 2:30ಕ್ಕೆ ನಡೆಸಲಾಗುವುದು. ಈಗ ಮಧ್ಯಂತರ ಆದೇಶ ನೀಡಲು ಬಯಸುತ್ತೇವೆ ಎಂದು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ನೇತೃತ್ವದ ವಿಶೇಷ ಪೀಠವು ತಿಳಿಸಿದೆ. ಕರ್ನಾಟಕದ ಶಾಲಾ- ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಉಡುಪಿಯ ಮುಸ್ಲಿಂ ವಿದ್ಯಾರ್ಥಿನಿಯರ ಅರ್ಜಿ ಮತ್ತು ಇದೇ ವಿಚಾರದಲ್ಲಿ ಅನೇಕ ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಬುಧವಾರ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರ ಏಕಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆದಿತ್ತು. ಬಳಿಕ ನ್ಯಾಯಮೂರ್ತಿಗಳು ಅರ್ಜಿ ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿದ್ದರು. ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ನೇತೃತ್ವದ ವಿಶೇಷ ಪೀಠದಲ್ಲಿ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್, ನ್ಯಾಯಮೂರ್ತಿ ಖಾಜಿ ಜೈಬುನ್ನಿಸಾ ಮೊಹಿದ್ದೀನ್ ಇದ್ದಾರೆ.