ಕೇಂದ್ರ ಸರ್ಕಾರಿ ನೌಕರರಿಗೆ ಹಬ್ಬಕ್ಕೆ ಭರ್ಜರಿ ಗಿಫ್ಟ್‌ - ತುಟ್ಟಿಭತ್ಯೆ ಶೇ.4ರಷ್ಟು ಹೆಚ್ಚಳ

ಕೇಂದ್ರ ಸರ್ಕಾರಿ ನೌಕರರಿಗೆ ಹಬ್ಬಕ್ಕೆ ಭರ್ಜರಿ ಗಿಫ್ಟ್‌ - ತುಟ್ಟಿಭತ್ಯೆ ಶೇ.4ರಷ್ಟು ಹೆಚ್ಚಳ

ನವದೆಹಲಿ: ದಸರಾ ಹಬ್ಬದ ಸಂದರ್ಭದಲ್ಲಿ ಹಾಗೂ ದೀಪಾವಳಿಗೂ ಮುನ್ನ ಕೇಂದ್ರ ಸರ್ಕಾರವು ತನ್ನ ನೌಕರರಿಗೆ ಭರ್ಜರಿ ಉಡುಗೊರೆ ನೀಡಿದೆ. 

ಹೌದು. ಡಿಎ ಹೆಚ್ಚಳಕ್ಕಾಗಿ ತಿಂಗಳುಗಟ್ಟಲೆಯಿಂದ ಕಾಯುತ್ತಿದ್ದ ನೌಕರರ ನಿರೀಕ್ಷೆ ಕೊನೆಗೊಂಡಿದೆ. ತುಟ್ಟಿಭತ್ಯೆ ಮತ್ತು ಪಿಂಚಣಿದಾರರಿಗೆ 4% ರಷ್ಟು ತುಟ್ಟಿಭತ್ಯೆ ಹೆಚ್ಚಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. 

ಪ್ರಸ್ತುತ, ಕೇಂದ್ರ ಸರ್ಕಾರಿ ನೌಕರರು 42% ತುಟ್ಟಿಭತ್ಯೆಯನ್ನು ಪಡೆಯುತ್ತಿದ್ದಾರೆ. ಹಣದುಬ್ಬರದ ವಿರುದ್ಧ ಹೋರಾಡಲು, ಕೇಂದ್ರ ಸರ್ಕಾರವು ನಿಯತಕಾಲಿಕವಾಗಿ ತುಟ್ಟಿಭತ್ಯೆಯನ್ನು ಹೆಚ್ಚಿಸುತ್ತದೆ.