ಇಂಡಿಯಾ ಮೈತ್ರಿಕೂಟಕ್ಕೆ ಬಿಗ್‌ ಶಾಕ್ : ಏಕಾಂಗಿಯಾಗಿ ಹೋರಾಡುತ್ತೇನೆ ಎಂದ ದಿದಿ

ಇಂಡಿಯಾ ಮೈತ್ರಿಕೂಟಕ್ಕೆ ಬಿಗ್‌ ಶಾಕ್ : ಏಕಾಂಗಿಯಾಗಿ ಹೋರಾಡುತ್ತೇನೆ ಎಂದ ದಿದಿ

ಕೊಲ್ಕತ್ತಾ : ಇಂಡಿಯಾ ಒಕ್ಕೂಟಕ್ಕೆ ಭಾರೀ ಹಿನ್ನಡೆಯಾಗಿದೆ. ಬಂಗಾಳದಲ್ಲಿ ಏಕಾಂಗಿಯಾಗಿ ಎದುರಿಸುವುದಾಗಿ ಸಿಎಂ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ. 

ಬಂಗಾಳದಲ್ಲಿ ಕಾಂಗ್ರೆಸ್ 10-12 ಸ್ಥಾನಕ್ಕೆ ಬೇಡಿಕೆ ಇಟ್ಟಿದೆ. ಆದರೆ ಟಿಎಂಸಿ 2 ಸ್ಥಾನ ಮಾತ್ರ ಕಾಂಗ್ರೆಸ್‌ಗೆ ಬಿಟ್ಟುಕೊಡಲು ಒಪ್ಪಿದೆ. ಇದಕ್ಕೆ ಕಾಂಗ್ರೆಸ್‌ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ. ಈ ಕುರಿತು ಸ್ಪಷ್ಟನೆ ನೀಡಿರುವ ಸಿಎಂ,ನಾನು ಏನೇ ಆಫರ್‌ ಮಾಡಿದರೂ ಅವರು ಎಲ್ಲವನ್ನೂ ನಿರಾಕರಿಸಿದರು ಎಂದು ಹೇಳಿದ್ದಾರೆ. 

ಒಟ್ಟಿನಲ್ಲಿ ಮಿತ್ರಕೂಟಕ್ಕೆ ಭಾರೀ ದೊಡ್ದ ಹಿನ್ನಡೆಯಾಗಿ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಕ್ಷೇತ್ರ ಹಂಚಿಕೆ ಬಗ್ಗೆ ಗೊಂದಲ ಉಂಟಾಗಿದ್ದರಿಂದ ಇಂಡಿಯಾ ಮಿತ್ರಕೂಟಕ್ಕೆ ಬೆಂಬಲ ನೀಡಿದ್ದ ದೀದಿ ಉಲ್ಟಾ ಹೊಡೆದಿದ್ದಾರೆ. ತೃಣಮೂಲ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಮಾತ್ರ ತಮ್ಮ ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಹೇಳಿದ್ದಾರೆ.