ಬೆಂಗಳೂರು : ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ ಬಿಜೆಪಿ ನಿಯೋಗ

ಬೆಂಗಳೂರು : ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ ಬಿಜೆಪಿ ನಿಯೋಗ

ಬೆಂಗಳೂರು : ಚಿತ್ತಾಪುರದಲ್ಲಿ ಪ್ರಿಯಾಂಕ್ ಖರ್ಗೆ ಬೆಂಬಲಿಗರಿಂದ ವಿಧಾನಪರಿಷತ್ನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿಗೆ ಘೇರಾವ್ ಹಾಕಿದ ಸಂಬಂಧ ಸಚಿವ ಪ್ರೀಯಾಂಕ್ ಖರ್ಗೆ ಮತ್ತು ಅವರ ಬೆಂಬಲಿಗರ ವಿರುದ್ಧ ಬಿಜೆಪಿ ನಿಯೋಗ ರಾಜ್ಯಪಾಲರಿಗೆ ದೂರು ನೀಡಿದೆ. 

ವಿರೋಧ ಪಕ್ಷದ ನಾಯಕ ಆರ್ ಅಶೋಕ್ ನೇತೃತ್ವದ ಬಿಜೆಪಿ ನಿಯೋಗ ರಾಜಭವನದಲ್ಲಿ ರಾಜಪಾಲ ಥಾವರ್ ಚೆಂದ್ ಗೆಹ್ಲೋಟ್ ರನ್ನ ಭೇಟಿಯಾಗಿ ಪ್ರೀಯಾಂಕ್ ಖರ್ಗೆ ವಿರುದ್ಧ ದೂರು ನೀಡಿದರು. ನಿಯೋಗದಲ್ಲಿ ಅಶೋಕ್ ಜೊತೆ ಛಲವಾದಿ ನಾರಾಯಣಸ್ವಾಮಿ, ಎನ್ ರವಿಕುಮಾರ್, ಉದಯ್ ಗರುಡಾಚಾರ್ ಮತ್ತಿತರರು ಉಪಸ್ಥಿತಿರಿದ್ದರು. 

ರಾಜ್ಯಪಾಲರ ಭೇಟಿ ಬಳಿಕ ಮಾತನಾಡಿದ ವಿಪಕ್ಷ ನಾಯಕ ಆರ್ ಅಶೋಕ್,ರಾಜ್ಯಪಾಲರನ್ನ ಭೇಟಿ ಮಾಡಿದ್ದೇವೆ, ನಿನ್ನೆ ಚಾರ್ಜ್ ಸೀಟ್ ಬಿಡುಗಡೆ ಮಾಡಿ ಕಲಬುರಗಿ ಕಾರ್ಯಕ್ರಮಕ್ಕೆ ಛಲವಾದಿ ನಾರಾಯಣಸ್ವಾಮಿ ಹೋಗಿದ್ರು, ಪರಿಷತ್ ವಿಪಕ್ಷ ನಾಯಕ ಸರ್ಕಾರವನ್ನು ಪ್ರಶ್ನೆ ಮಾಡ್ತಾರೆ,ಛಲವಾದಿ ನಾರಾಯಣಸ್ವಾಮಿಗೆ ಕಾರ್ಯಕ್ರಮಕ್ಕೆ ಹೋಗಲು ಅವಕಾಶ ಕೊಡಲಿಲ್ಲ, 

ಸತತ ಐದು ಗಂಟೆಗಳ ಕಾಲ ಛಲವಾದಿ ನಾರಾಯಣಸ್ವಾಮಿ ಅವರನ್ನು ಲಾಕ್ ಮಾಡಿದ್ರು, ಅವಾಚ್ಯ ಪದಗಳಿಂದ ನಿಂದನೆ ಮಾಡಿದ್ದಾರೆ, ಪ್ರಿಯಾಂಕ ಖರ್ಗೆ ಇದರ ಹಿಂದೆ ಇದಾರೆ ಅಂತ ಗವರ್ನರ್ ಗೆ ದೂರು ನೀಡಿದ್ದೇವೆ, ಯಾರೆಲ್ಲ ಗೂಂಡಾಗಳು ಇದಾರೆ ಅವರ ಮೇಲೆ ದೂರು ತೆಗೆದುಕೊಳ್ಳಲು ಮನವಿ ಮಾಡಿದ್ದೇವೆ ಎಂದು ತಿಳಿಸಿದರು.