ಬಿಜೆಪಿ ನಾಯಕ ಮನ್‌ಪ್ರೀತ್ ಸಿಂಗ್ ಬಾದಲ್‌ಗೆ ಹೃದಯಾಘಾತ

ಬಿಜೆಪಿ ನಾಯಕ ಮನ್‌ಪ್ರೀತ್ ಸಿಂಗ್ ಬಾದಲ್‌ಗೆ ಹೃದಯಾಘಾತ

ನವದೆಹಲಿ: ಬಿಜೆಪಿ ನಾಯಕ ಮತ್ತು ಪಂಜಾಬ್ ಮಾಜಿ ಹಣಕಾಸು ಸಚಿವ ಮನ್‌ಪ್ರೀತ್ ಸಿಂಗ್ ಬಾದಲ್ ಭಾನುವಾರ ಹೃದಯಾಘಾತಕ್ಕೆ ಒಳಗಾಗಿದ್ದಾರೆ. 

61 ವರ್ಷ ವಯಸ್ಸಿನ ಮನ್‌ಪ್ರೀತ್ ಸಿಂಗ್ ಬಾದಲ್ ಅವರ ಅಪಧಮನಿಯೊಂದರಲ್ಲಿ ಅಡಚಣೆ ಉಂಟಾಗಿದ್ದರಿಂದ ಆಂಜಿಯೋಪ್ಲಾಸ್ಟಿಗೆ ಒಳಗಾಗಿದ್ದಾರೆ. ಅಕಾಲಿದಳದ ಮುಖ್ಯಸ್ಥ ಪ್ರಕಾಶ್ ಸಿಂಗ್ ಬಾದಲ್ ಅವರ ಸೋದರಳಿಯ ಮನ್‌ಪ್ರೀತ್ ಕಳೆದ ವರ್ಷ ಜನವರಿಯಲ್ಲಿ ಕಾಂಗ್ರೆಸ್‌ನಿಂದ ಬಿಜೆಪಿಗೆ ಸೇರ್ಪಡೆಗೊಂಡಿದ್ದರು.