243 ಸ್ಥಾನಗಳ ಬಿಹಾರ ವಿಧಾನಸಭೆಯಲ್ಲಿ ದ್ವಿಶತಕ ಬಾರಿಸಿದ ಬಿಜೆಪಿ ನೇತೃತ್ವದ ಎನ್‌ಡಿಎ
ಪಾಟ್ನಾ: ಬಿಹಾರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವಿನತ್ತ ಸಾಗುತ್ತಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಸತತ ಐದನೇ ಅವಧಿಗೆ ಅಧಿಕಾರ ವಹಿಸಿಕೊಳ್ಳಲು ಸಿದ್ಧರಾಗಿದ್ದಾರೆ. ಇತ್ತೀಚಿನ ಟ್ರೆಂಡ್‌ಗಳ ಪ್ರಕಾರ, 243 ಸ್ಥಾನಗಳ ಬಿಹಾರ ವಿಧಾನಸಭೆಯಲ್ಲಿ ಎನ್‌ಡಿಎ 201 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಎನ್‌ಡಿಎಯ ಪ್ರಮುಖ ಪಕ್ಷಗಳಾದ ಬಿಜೆಪಿ 91, ಜೆಡಿ (ಯು) 81, ಮತ್ತು ಎಲ್‌ಜೆಪಿಆರ್‌ವಿ 21 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ. ಏತನ್ಮಧ್ಯೆ, ರಾಜ್ಯದಲ್ಲಿ ಆರ್‌ಜೆಡಿ 26 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದರೆ ಮತ್ತು ಕಾಂಗ್ರೆಸ್ ಕೇವಲ 4 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.