ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 370 ಸ್ಥಾನ ಗೆಲ್ಲಲಿದೆ: ಮೋದಿ ವಿಶ್ವಾಸ

ನವದೆಹಲಿ: ಬರುವ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಒಕ್ಕೂಟ 400ಕ್ಕೂ ಅಧಿಕ ಸ್ಥಾನ ಗೆಲ್ಲಲಿದೆ. ಬಿಜೆಪಿ 370ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದರು.
ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯ ಸಲ್ಲಿಸಿ ಮಾತನಾಡಿದ ಅವರು, ಮಾತಿನ ನಡುವೆ ಅಬ್ ಕೀ ಬಾರ್ ಎಂದಿದ್ದಾರೆ. ಇದಕ್ಕೆ ದನಿಗೂಡಿಸಿದ ಬಿಜೆಪಿ ಸಂಸದರು 'ಚಾರ್ ಸೌ ಪಾರ್'(400ಕ್ಕೂ ಅಧಿಕ) ಎಂದು ಹೇಳಿ ಸಂಭ್ರಮಿಸಿದ್ದಾರೆ.