ನಾಳೆ ಬಿಎಂಟಿಸಿ, ಕೆಎಸ್‌ಆರ್‌ಟಿಸಿ, ಮೆಟ್ರೋ ಸೇವೆಗಳು ಎಂದಿನಂತೆ ಲಭ್ಯ

ಬೆಂಗಳೂರು: ನಾಳೆ ಅಖಂಡ ಕರ್ನಾಟಕ ಬಂದ್‌ಗೆ ವಾಟಾಳ್ ನಾಗರಾಜ್ ಕರೆ ನೀಡಿದ್ದು, ಸಾಕಷ್ಟು ಸಂಘ ಸಂಸ್ಥೆಗಳು ಬಂದ್‌ಗೆ ಬೆಂಬಲ ನೀಡಿವೆ. ಒಲಾ, ಉಬರ್ ಟ್ಯಾಕ್ಸಿ ಅಸೋಸಿಯೇಷನ್, ಕರ್ನಾಟಕ ರಾಜ್ಯ ಟ್ಯಾಕ್ಸಿ ಅಸೋಸಿಯೇಷನ್ ಬೆಂಬಲ ನೀಡಿವೆ. ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಸೇರಿದಂತೆ ನಮ್ಮ ಮೆಟ್ರೋ ಎಂದಿನಂತೆ ಸಂಚಾರಿಸಲಿದೆ.
ಮಹಾರಾಷ್ಟ್ರದಲ್ಲಿ ಕನ್ನಡಿಗ ಬಸ್ ಚಾಲಕನ ಮೇಲೆ ಹಲ್ಲೆ ಖಂಡಿಸಿ ಹಾಗೂ ರಾಜ್ಯದ ಇನ್ನೂ ಇತರೆ ತೊಂದರೆಗಳ ಬಗ್ಗೆ ನಾಳೆ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಅಖಂಡ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ನಾಳೆ ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ರಾಜ್ಯ ವ್ಯಾಪ್ತಿ ಬಂದ್‌ಗೆ ಕರೆಕೊಡಲಾಗಿದೆ.